Mangalore: ರಿಕ್ಕಿ ರೈಗೆ ಕರೆ ಮಾಡಿಲ್ಲ-ಡಿಕೆಶಿ ಸ್ಪಷ್ಟನೆ!

Mangalore: ಗುಂಡೇಟಿನಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ ಎಂದು ಹೇಳಲಾಗಿತ್ತು. ಈ ಕುರಿತು ಡಿಕೆಶಿಯವರೇ ಸ್ಪಷ್ಟನೆ ನೀಡಿದ್ದಾರೆ.
ನಾನು ರಿಕ್ಕಿ ರೈಗೆ ಕರೆ ಮಾಡಿ ಮಾತನಾಡಿಲ್ಲ. ನನ್ನ ಜಿಲ್ಲೆಯಲ್ಲಿ ರಿಕ್ಕಿ ರೈ ಮೇಲೆ ದಾಳಿಯಾಗಿದೆ. ಪೊಲೀಸರಿಗೆ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಲು ಹೇಳಿದ್ದೇನೆ. ಯಾವುದೇ ಪಕ್ಷ ಇದ್ದರೂ ಕಾನೂನಿಗೆ ತಲೆ ಬಾಗಲೇಬೇಕು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡುತ್ತಾ ಹೇಳಿದ್ದಾರೆ.
Comments are closed.