Belthangady: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿಯ ದರ್ಶನ ಪಡೆದ ಡಿಕೆಶಿ!

Share the Article

Belthangady: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎ.19 (ನಿನ್ನೆ) ರಂದು ಆಗಮಿಸಿ, ವಾಸ್ತವ್ಯ ಹೂಡಿದ್ದು, ಎ.20 (ಇಂದು) ಮುಂಜಾನೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನವನ್ನು ಪಡೆದರು.

ಡಿಕೆಶಿ ಅವರು ಮಂಜುನಾಥ ಸ್ವಾಮಿಗೆ ಪ್ರಾರ್ಥನೆ ಮಾಡಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿ, ಆಶೀರ್ವಾದ ಪಡೆದರು.

ಇಂದು 11 ಗಂಟೆಗೆ ಬೆಳ್ತಂಗಡಿ ವಾಣಿ ಶಿಕ್ಷಣ ಸಂಸ್ಥೆಯ ನೂತನ ಸಭಾಭವನ ಉದ್ಘಾಟನಾ ಕಾರ್ಯಕ್ರಮ, ಮಧ್ಯಾಹ್ನ 12 ಗಂಟೆಗೆ ಗುರುವಾಯನಕೆರೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶ, 2.30 ಗಂಟೆಗೆ ಗುರುವಾಯನಕೆರೆ ಎಕ್ಸೆಲ್ ವಿದ್ಯಾಸಂಸ್ಥೆಗೆ ಭೇಟಿ ಬಳಿಕ ರಾಘವೇಂದ್ರ ಮಠ ಲಾಯಿಲ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. 3 ಗಂಟೆಗೆ ಕನ್ಯಾಡಿ ಶ್ರೀರಾಮ ಮಂದಿರ ಭೇಟಿ, ಸಂಜೆ 4 ಗಂಟೆಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪಗಳ ಸಮುಚ್ಚಯ ಉದ್ಘಾಟನೆ ಹಾಗೂ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿಯ ಸನ್ನಿಧಾನದಲ್ಲಿ ಪೂಜೆ ನೆರವೇರಿಸಿ, ರಾತ್ರಿ 8 ಗಂಟೆಗೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಉಪಮುಖ್ಯಮಂತ್ರಿಗಳು ಬೆಂಗಳೂರಿಗೆ ತೆರಳಲಿದ್ದಾರೆ.

Comments are closed.