Belthangady: ಕಾರುಗಳ ಡಿಕ್ಕಿ; ಮೂವರಿಗೆ ಗಾಯ!

Share the Article

Belthangady: ಗುರುವಾಯನಕೆರೆ-ಕಾರ್ಕಳ ರಸ್ತೆಯ ಅಳದಂಗಡಿಯ ಕೆದ್ದುವಿನಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ ಗಾಯಗೊಂಡ ಘಟನೆ ಎ.21 ರ ಸಂಜೆ ನಡೆದಿದೆ.

ಅಳದಂಗಡಿಯಿಂದ ಗುರುವಾಯನಕೆರೆ ಕಡೆ ಹೋಗುತ್ತಿದ್ದ ಕಾರು ಹಾಗೂ ಗುರುವಾಯನಕೆರೆಯಿಂದ ಕಾರ್ಕಳದತ್ತ ಪ್ರಯಾಣ ಮಾಡುತ್ತಿದ್ದ ಕಾರುಗಳು ಪರಸ್ಪರ ಡಿಕ್ಕಿ ಹೊಡೆದಿದೆ.

ಈ ಘಟನೆಯಲ್ಲಿ ಗೇರುಕಟ್ಟೆಯ ಕುಸುಮಾವತಿ (75), ಭಾಗ್ಯವತಿ (50), ವೈಭವ್‌ (23) ಎಂಬುವವರು ಗಂಭೀರ ಗಾಯಗೊಂಡಿದ್ದು, ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿರುವ ಕುರಿತು ವರದಿಯಾಗಿದೆ.

Comments are closed.