D K Shivakumar: ಮುಂದಿನ ಚುನಾವಣೆಯಲ್ಲಿ ತುಳುನಾಡಿನಿಂದ 10 ಮಂದಿ ಕಾಂಗ್ರೆಸ್ ಶಾಸಕರು- ಡಿಕೆಶಿ

D K Shivakumar: ಬೆಳ್ತಂಗಡಿ ನಗರ ಹಾಗೂ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಗುರುವಾಯನಕೆರೆಯಲ್ಲಿ ಭಾನುವಾರ ನಡೆದ ಸರಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ, ಉಪಮುಖ್ಯಮಂತ್ರಿ ಡಿಕೆಶಿ ಅವರು, ʼಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಬಹುಮತದಿಂದ ಗೆಲುವು ಪಡೆಯಲಿದೆ. ತುಳುನಾಡಿನಿಂದ ಕನಿಷ್ಠ ಹತ್ತು ಮಂದಿ ಕಾಂಗ್ರೆಸ್ ಶಾಸಕರು ಆಯ್ಕೆಯಾಗಲಿದ್ದಾರೆ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿದ್ದು, ಕಾರ್ಯಕರ್ತರು ಆತ್ಮವಿಶ್ವಾಸದಿಂದ ಚುನಾವಣೆ ಎದುರಿಸಬಹುದಾಗಿದೆ. ಸರ್ಕಾರದ ಸಾಧನೆಗಳೇ ಕಾಂಗ್ರೆಸ್ ಪಕ್ಷಕ್ಕೆ ಶ್ರೀರಕ್ಷೆಯಾಗಿದೆ ಎಂದು ಹೇಳಿದರು.ಕಾಂಗ್ರೆಸ್ ಪಕ್ಷ ಜನರ ಬದುಕನ್ನು ಕಟ್ಟುವ ಕಾರ್ಯ ಮಾಡಿದೆ. ಆದರೆ ಬಿಜೆಪಿ ಜನರ ಭಾವನೆಗಳೊಂದಿಗೆ ಆಟವಾಡುವ ಕಾರ್ಯ ಮಾಡುತ್ತಿದೆ. ಜನರು ಅದನ್ನು ಅರ್ಥ ಮಾಡಿಕೊಳ್ಳುತ್ತಾರೆ. ಅಧಿಕಾರದಲ್ಲಿ ಯಾರೂ ಶಾಶ್ವತವಲ್ಲ, ಆದರೆ ಜನರ ಹೃದಯ ಗೆಲ್ಲುವ ಕಾರ್ಯ ಮಾಡೋಣ ಎಂದರು.
Comments are closed.