D K Shivkumar : ನೂರಾರು ಮಂದಿ ಡಿಕೆ ಶಿವಕುಮಾರ್ ಧರ್ಮಸ್ಥಳವನ್ನ, ನಿಮ್ಮನ್ನ ರಕ್ಷಣೆ ಮಾಡ್ತೇವೆ – ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಗೆ ಡಿಕೆಶಿ ಭರವಸೆ !!

D K Shivkumar : ರಾಜ್ಯದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಿನ್ನೆ ದಿನ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಯ (Shri Manjunatha Swamy) ದರ್ಶನ ಪಡೆದು, ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆಯವರನ್ನು (D. Veerendra Heggade) ಭೇಟಿಯಾಗಿ ಮಾತುಕತೆ ನಡೆಸಿ, ಬಳಿಕ ಕಲ್ಯಾಣ ಮಂಟವನ್ನು ಡಿಸಿಎಂ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಅವರು ನನ್ನಂತಹ ನೂರು ಜನ ಡಿಕೆ ಶಿವಕುಮಾರ್ ಗಳು, ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆಯವರ ರಕ್ಷಣೆ ಮಾಡುತ್ತೇವೆ ಎಂದು ಘೋಷಿಸಿದ್ದಾರೆ.
ಈ ವೇಳೆ ಮಾತನಾಡಿದ ಅವರು “ಡಾ. ವೀರೇಂದ್ರ ಹೆಗ್ಗಡೆಯವರು ನಡೆದು ಬಂದ ದಾರಿ ಮತ್ತು ರಾಜ್ಯಕ್ಕೆ ಕೊಟ್ಟ ಮಾರ್ಗದರ್ಶನ ದೊಡ್ಡದು. ಭಕ್ತನಿಗೂ ಭಗವಂತನಿಗೂ ವ್ಯವಹಾರ ನಡೆಯುವ ಸ್ಥಳ ದೇವಾಲಯ. ಹೆಗ್ಗಡೆಯವರು ಮಾಡಿದ ಸಾಧನೆ ಧರ್ಮ ಮತ್ತು ಧಾರ್ಮಿಕ ಚರಿತ್ರೆಯಲ್ಲಿ ದಾಖಲಾಗಿದೆ. ನನ್ನ ತಮ್ಮ ಪ್ರತೀ ವರ್ಷ ಧರ್ಮಸ್ಥಳದಲ್ಲೇ ಹುಟ್ಟು ಹಬ್ಬ ಆಚರಿಸ್ತಾನೆ. ನಾನು ಮತ್ತು ನನ್ನ ಕುಟುಂಬ ಕೂಡ ಇಲ್ಲಿಗೆ ಬರ್ತಾ ಇರ್ತೇವೆ” ಅಂತ ಸ್ಮರಿಸಿಕೊಂಡ್ರು.
ಬಳಿಕ ಮಾತನಾಡಿದ ಅವರು “ಕೆಲವರು ಧರ್ಮಸ್ಥಳದ ವಿಚಾರದಲ್ಲಿ ವಾದ ಮತ್ತು ಟೀಕೆಗಳನ್ನು ಮಾಡ್ತಾರೆ. ಶ್ರೀಗಳು ಜೈನರು, ಅವರು ಹೇಗೆ ಮಂಜುನಾಥನ ನಂಬ್ತಾರೆ ಅಂತ ಕೇಳ್ತಾರೆ. ಹೀಗೆ ವಾದ ಮಾಡಿದ ಕೆಲ ನಾಯಕರು, ಸಮಾಜ ಸೇವಕರು, ಚಿಂತಕರೆಲ್ಲ ಇದ್ದಾರೆ. ಧರ್ಮ ಯಾವುದಾದರೂ ತತ್ವ ಒಂದೆ, ದೇವನೊಬ್ಬ ನಾಮ ಹಲವು. ಪೂಜೆ ಯಾವುದಾದರೂ ಭಕ್ತಿ ಒಂದೇ. ಇಂತಹ ಪವಿತ್ರವಾದ ಕ್ಷೇತ್ರವನ್ನ ಉಳಿಸಿಕೊಂಡು ಬೆಳೆಸಿ ಕೊಂಡು ಹೋಗಬೇಕಿದೆ. ಸಣ್ಣಪುಟ್ಟ ಮಾತನಾಡೋರು ಹಾಗೂ ಟೀಕೆ ಮಾಡೋರು ಬೇಕಾದಷ್ಟು ಜನ ಇರ್ತಾರೆ ಎಂದು ಹೇಳಿದರು.
ಅಲ್ಲದೆ ” ನೀವು ನಿಮ್ಮ ಸೇವೆಯನ್ನು ಮುಂದುವರೆಸಿಕೊಂಡು ಹೋಗಿ. ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ. ನೀವು ಯಾವುದೇ ಸಂದರ್ಭದಲ್ಲಿ ಅಂಜುವ ಅಗತ್ಯವಿಲ್ಲ. ನನ್ನಂಥ ಸಾವಿರಾರು ಜನ ಡಿಕೆ ಶಿವಕುಮಾರ್ ನಿಮ್ಮ ಬೆನ್ನಿಗೆ ನಿಲ್ಲಲು ಸಿದ್ದರಿದ್ದೇವೆ. ನಿಮ್ಮ ಪರಿಶುದ್ದವಾದ ಶ್ರಮ, ಸೇವೆ ಇಡೀ ರಾಷ್ಟ್ರದಲ್ಲಿ ನಾವು ಗಮನಿಸಿದ್ದೇವೆ. ಹಾಗಾಗಿ ನೀವು ಚಿಂತೆ ಮಾಡೋದು ಬೇಡ, ಸಮಾಜ ಸೇವೆ ಮಾಡಿ. ಚಿಂತೆ ಮಾಡದೇ ಆರೋಗ್ಯ ಕಾಪಾಡಿಕೊಂಡು ಸೇವೆ ಮುಂದುವರೆಸಿ. ನನ್ನಂಥ ನೂರಾರು ಡಿ.ಕೆ. ಶಿವಕುಮಾರ್ ಈ ಕ್ಷೇತ್ರವನ್ನ ಮತ್ತು ನಿಮ್ಮನ್ನ ರಕ್ಷಣೆ ಮಾಡೋ ಕೆಲಸ ಮಾಡ್ತಾರೆ ಅಂತ ಡಿಸಿಎಂ ಭರವಸೆ ನೀಡಿದ್ರು.
Comments are closed.