Malpe: ದೈವಸ್ಥಾನದ ಕಾಣಿಕೆ ಡಬ್ಬಿ ಒಡೆದು ಕಳ್ಳತನ!

Malpe: ಕೊಡವೂರು ಪಾಳೆಕಟ್ಟೆ ಶ್ರೀ ಬಬ್ಬುಸ್ವಾಮಿ ದೈವಸ್ಥಾನ ದೇವರಬೆಟ್ಟು ಆವರಣ ಗೋಡೆಯ ಹೊರಭಾಗದಲ್ಲಿರುವ ಕಾಣಿಕೆ ಡಬ್ಬಿಯನ್ನು ಒಡೆದು ಅದರಲ್ಲಿರುವ ಹಣವನ್ನು ಕಳವು ಮಾಡಿರುವ ಘಟನೆ ನಡೆದಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.
ಎ.19 ರಂದು ಸಂಜೆ 6 ರಿಂದ 8.45 ರ ಸುಮಾರಿಗೆ ಈ ಘಟನೆ ನಡೆದಿರುವುದಾಗಿ ವರದಿಯಾಗಿದೆ. ಕಾಣಿಕೆ ಡಬ್ಬಿಯಲ್ಲಿದ್ದ 15ಸಾವಿರ ಹಣ ಕಳವು ಮಾಡಲಾಗಿರುವ ಕುರಿತು ದೂರಿನಲ್ಲಿ ತಿಳಿಸಲಾಗಿದೆ.
Comments are closed.