Viral Video : ಕಾಲೇಜ್ ಕ್ಯಾಂಪಸ್ ನಲ್ಲಿ ಮೊಬೈಲ್ ಕಿತ್ತುಕೊಂಡ ಲೆಕ್ಚರ್ – ಚಪ್ಪಲಿಯಲ್ಲಿ ಹೊಡೆದ ವಿದ್ಯಾರ್ಥಿನಿ!!

Share the Article

Viral Video : ಕಾಲೇಜ್ ಕ್ಯಾಂಪಸ್ ನಲ್ಲಿ ವಿದ್ಯಾರ್ಥಿನಿ ಒಬ್ಬಳು ಮೊಬೈಲ್ನಲ್ಲಿ ಮಾತನಾಡುವಾಗ ಲೆಕ್ಚರ್ ಬಂದು ಆ ಮೊಬೈಲನ್ನು ಕಿತ್ತುಕೊಂಡಿದ್ದಾರೆ. ಇದರಿಂದ ಸಿಟ್ಟುಗೊಂಡ ಆ ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲಿ ಲೆಕ್ಚರ್ ಗೆ ಹೊಡೆದ ಅಚ್ಚರಿ ಪ್ರಕರಣ ಒಂದು ಬೆಳಕಿಗೆ ಬಂದಿದೆ.

ಹೌದು, ಆಂಧ್ರ ಪ್ರದೇಶದ ವಿಜಯನಗರ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಅನಿರೀಕ್ಷಿತ ಘಟನೆಯೊಂದು ನಡೆದಿದೆ. ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯೊಬ್ಬಳು ಫೋನ್‌ನಲ್ಲಿ ಮಾತನಾಡುತ್ತಿದ್ದಾಗ, ಅದನ್ನು ಗಮನಿಸಿದ ಮಹಿಳಾ ಉಪನ್ಯಾಸಕಿಯೊಬ್ಬರು ವಿದ್ಯಾರ್ಥಿನಿಯನ್ನು ತಡೆದು, ಆಕೆಯಿಂದ ಫೋನ್ ಕಸಿದುಕೊಂಡರು. ಇದರಿಂದ ಕೋಪಗೊಂಡ ವಿದ್ಯಾರ್ಥಿನಿ, ಉಪನ್ಯಾಸಕಿ ಜತೆ ಅಲ್ಲಿಯೇ ವಾಗ್ವಾದಕ್ಕೆ ಇಳಿದು ಫೋನ್​ ಕೊಡುವಂತೆ ಒತ್ತಾಯಿಸಿದ್ದಾಳೆ. ಉಪನ್ಯಾಸಕಿ ಫೋನ್​ ಕೊಡಲು ನಿರಾಕರಿಸಿದಾಗ ತನ್ನ ಕಾಲಿನಲ್ಲಿದ್ದ ಚಪ್ಪಲಿಯೊಂದನ್ನು ಕಳಚಿದ ವಿದ್ಯಾರ್ಥಿನಿ, ಉಪನ್ಯಾಸಕಿಯ ಮೇಲೆ ಹಲ್ಲೆ ಮಾಡಿದ್ದಾಳೆ.

Comments are closed.