PM Modi: ʼಯಾರನ್ನೂ ಸುಮ್ಮನೆ ಬಿಡೋದಿಲ್ಲ…ʼ ಪಹಲ್ಗಾಮ್‌ ಟೆರರಿಸ್ಟ್‌ಗಳಿಗೆ ಮೋದಿ ವಾರ್ನಿಂಗ್‌!

Share the Article

PM Modi: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕರ ಗುಂಡಿನ ದಾಳಿ ಕುರಿತು ಸೌದಿ ಅರೇಬಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅಲ್ಲಿಂದಲೇ ಗೃಹ ಸಚಿವ ಅಮಿತ್‌ ಶಾಗೆ ತಕ್ಷಣವೇ ಘಟನಾ ಸ್ಥಳಕ್ಕೆ ತೆರಳುವಂತೆ ಸೂಚನೆ ನೀಡಿದ್ದಾರೆ.

ಇದರ ನಡುವೆ ಪ್ರಧಾನಿ ಮೋದಿ ಈ ಘಟನೆಯನ್ನು ಖಂಡಿಸಿ ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಕಾರಣರಾದ ಯಾರನ್ನೂ ಕೂಡಾ ಸುಮ್ಮನೆ ಬಿಡೋದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ. ಈ ಹೀನ ಕೃತ್ಯಕ್ಕೆ ಕಾರಣರಾದ ಎಲ್ಲರನ್ನೂ ಕಟಕಟೆಗೆ ತಂದು ನಿಲ್ಲಿಸುತ್ತೇವೆ ಎಂದು ಹೇಳಿದ್ದಾರೆ.

ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

Comments are closed.