Renukaswamy Murder Case: ರೇಣುಕಾಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್‌ ಜಾಮೀನು ರದ್ದು ಅರ್ಜಿ ವಿಚಾರಣೆ ಮೇ.14 ಕ್ಕೆ ಮುಂದೂಡಿಕೆ!

Share the Article

Renukaswamy Murder Case: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 2 ನೇ ಆರೋಪಿಯಾಗಿರುವ ನಟ ದರ್ಶನ್‌ ಗೆ ಹೈಕೋರ್ಟ್‌ ನೀಡಿದ ಜಾಮೀನನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ರಾಜ್ಯ ಸರಕಾರ ಅರ್ಜಿ ಸಲ್ಲಿಕೆ ಮಾಡಿತ್ತು. ಅದರ ವಿಚಾರಣೆ ಇಂದು ದ್ವಿಸದಸ್ಯ ಪೀಠದಲ್ಲಿ ಅರ್ಜಿ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಸಿದ್ದಾರ್ಥ್ ಲೂಥ್ರಾ ಅವರು ವಾದ ಮಾಡಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಕುರಿತಂತೆ ನಟ ದರ್ಶನ್‌ ಜಾಮೀನು ಅರ್ಜಿ ವಿಚಾರಣೆಯನ್ನು ಮೇ.14 ಕ್ಕೆ ಮುಂದೂಡಿದೆ.

ಪ್ರಕರಣದಲ್ಲಿ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರಕಾರ ಅರ್ಜಿ ಸಲ್ಲಿಸಿದೆ. ಮೇ.14 ರಂದು ಜಾಮೀನು ಭವಿಷ್ಯ ನಿರ್ಧಾರವಾಗಲಿದೆ.

Comments are closed.