Actor Darshan: ನಟ ದರ್ಶನ್‌ ಜಾಮೀನು ಭವಿಷ್ಯ ಇಂದು ನಿರ್ಧಾರ!

Share the Article

Actor Darshan: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್‌ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

ದರ್ಶನ್‌ ಜಾಮೀನು ರದ್ದು ಕೋರಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡಿತ್ತು. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಏಳು ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರಕಾರ ಅರ್ಜಿ ಸಲ್ಲಿಸಿದೆ.

ಹೈಕೋರ್ಟ್‌ 2024 ಡಿಸೆಂಬರ್‌ನಲ್ಲಿ ಜಾಮೀನು ನೀಡಿದ್ದು, ಹೈಕೋರ್ಟ್‌ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಸರಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಈ ಅರ್ಜಿಯ ವಿಚಾರಣೆ ನಡೆಯಲಿದ್ದು, ದರ್ಶನ್‌ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ.

Comments are closed.