AI:ಮಕ್ಕಳ ವಯಸ್ಸು ಪತ್ತೆಗೆ ಕೃತಕ ಬುದ್ಧಿಮತ್ತೆ ಬಳಕೆ; ಇನ್‌ಸ್ಟಾಗ್ರಾಂ ನಿರ್ಧಾರ!

AI: 13 ವರ್ಷಕ್ಕಿಂತ ಕಿರಿಯರ ಬಳಕೆಗೆ ಅನುಮತಿಸದ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂ ಇದೀಗ ಹದಿಹರೆಯದವರು ನಕಲಿ ವಯಸ್ಸು ದಾಖಲಿಸಿ ವಯಸ್ಕರ ಖಾತೆಯನ್ನು ಹೊಂದುವುದನ್ನು ಪತ್ತೆ ಮಾಡಲು ಕೃತಕ ಬುದ್ಧಿಮತ್ತೆಯನ್ನು ಬಳಸಲು ಸಿದ್ಧತೆ ನಡೆಸಿದೆ.
ಅಪ್ರಾಪ್ತ ಬಳೆಕೆದಾರರು ಉದ್ದೇಶಪೂರ್ವಕವಾಗಿ ತಮ್ಮ ಸುಳ್ಳು ಜನ್ಮದಿನಾಂಕವನ್ನು ದಾಖಲಿಸಿ ‘ವಯಸ್ಕ’ ಎಂದು ಬಿಂಬಿಸಿಕೊಂಡದ್ದು ಕಂಡು ಬಂದಲ್ಲಿ, ಅದನ್ನು ಎಐ ಮೂಲಕ ಪತ್ತೆ ಮಾಡಲಾಗುವುದು ಎಂದು ಅದು ತಿಳಿಸಿದೆ. ಆದರೆ ಇದನ್ನು ಯಾವ ಆಧಾರದಲ್ಲಿ ಪತ್ತೆ ಮಾಡಲಾಗುವುದು ಎಂಬ ಬಗ್ಗೆ ಮಾಹಿತಿ ನೀಡಿಲ್ಲ.
Comments are closed.