Annamali: ರಾಜ್ಯಸಭೆಗೆ ಅಣ್ಣಾಮಲೈ ?!

Share the Article

Annamali :ಮಾಜಿ ಐಪಿಎಸ್ ಅಧಿಕಾರಿ ಹಾಗೂ ಬಿಜೆಪಿ ಮುಖಂಡರಾದ ಅಣ್ಣಾಮಲೈ ಅವರ ಬಿಜೆಪಿ ರಾಜ್ಯಾಧ್ಯಕ್ಷ ಅಧಿಕಾರ ಅವಧಿ ಮುಗಿದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ಬಿಜೆಪಿಯ ತಿರುನಲ್ವೇಲಿ ಶಾಸಕ ನೈನಾರ್ ನಾಗೇಂದ್ರನ್‌ಅವರನ್ನು ಆಯ್ಕೆ ಮಾಡಿದೆ. ಇದರ ಬೆನ್ನಲ್ಲೇ ಅಣ್ಣಾಮಲೈ ಅವರಿಗೆ ರಾಜ್ಯಸಭೆಗೆ ಹೋಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹೌದು, ತಮಿಳುನಾಡು ಬಿಜೆಪಿ ಮುಖ್ಯಸ್ಥ ಹುದ್ದೆಯಿಂದ ಕೆಳಗಿಳಿದ ಕೆ ಅಣ್ಣಾಮಲೈ (K Annamalai) ಅವರನ್ನು ಬಿಜೆಪಿಯ ರಾಷ್ಟ್ರೀಯ ಸ್ಥಾನಕ್ಕೆ ಬಳಸಿಕೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹಿಂದೆ ಹೇಳಿದ್ದರು. ಇದೀಗ ಅವರು ರಾಜ್ಯಸಭೆ ಚುನಾವಣೆಗೆ ಆಂಧ್ರ ಪ್ರದೇಶದಿಂದ ಸ್ಪರ್ಧೆ ಮಾಡಲಿದ್ದಾರೆ? ಎಂಬ ಸುದ್ದಿಗಳು ಹಬ್ಬಿದೆ.

ಆಂಧ್ರ ಪ್ರದೇಶದಿಂದ ಮೂವರು ರಾಜ್ಯಸಭಾ ಸದಸ್ಯರನ್ನು ಆಯ್ಕೆ ಮಾಡಲು ಮೇ 9ರಂದು ಚುನಾವಣೆ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಕೆ ಮಾಡಲು ಏಪ್ರಿಲ್ 29 ಕೊನೆಯ ದಿನವಾಗಿದೆ. ಎನ್‌ಡಿಎ ಮೈತ್ರಿಕೂಟದ ಮಿತ್ರಪಕ್ಷವಾದ ಟಿಡಿಪಿ-ಜನಸೇನಾ ಒಂದು ಸ್ಥಾನವನ್ನು ಬಿಜೆಪಿಗೆ ನೀಡಿವೆ. ಈ ಒಂದು ಟಿಕೆಟ್‌ಗಾಗಿ ಕೆ. ಅಣ್ಣಾಮಲೈ, ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಹೆಸರು ಕೇಳಿ ಬರುತ್ತಿದೆ. ಕೆ. ಅಣ್ಣಾಮಲೈ ಅವರನ್ನು ರಾಜ್ಯಸಭಾ ಸದಸ್ಯರಾಗಿ ಮಾಡಿ, ಪ್ರಧಾನಿ ನರೇಂದ್ರ ಮೋದಿ ಸಂಪುಟಕ್ಕೆ ಸೇರಿಸಿಕೊಳ್ಳಲಾಗುತ್ತದೆ ಎಂಬ ಸುದ್ದಿಗಳು ಕೇಳಿ ಬರುತ್ತಿವೆ.

Comments are closed.