Terror Attack: ಪಹಲ್ಗಾಮ್‌ ದಾಳಿ ಬೆನ್ನಲ್ಲೇ ದೆಹಲಿಯಲ್ಲಿ ಭಾರೀ ಕಟ್ಟೆಚ್ಚರ!

Share the Article

New Delhi: ಜಮ್ಮು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಮಂಗಳವಾರ ಭಯೋತ್ಪಾದಕ ದಾಳಿ ನಡೆದಿದ್ದು, ಈ ಬೆನ್ನಲ್ಲೇ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿರುವ ಕುರಿತು ಅಧಿಕಾರಿಗಳು ತಿಳಿಸಿರುವ ವರದಿಯಾಗಿದೆ.

ದೆಹಲಿ ಪೊಲೀಸರು ಪಹಲ್ಗಾಮ್‌ ದಾಳಿಯ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದು, ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಿಕೊಂಡಿದ್ದಾರೆ. ಮುಖ್ಯವಾಗಿ ಪ್ರವಾಸಿ ತಾಣಗಳು, ಗಡಿ ಚೆಕ್‌ಪೋಸ್ಟ್‌ಗಳಲ್ಲಿ ಕಣ್ಗಾವಲು ಮತ್ತು ತಪಾಸಣೆಯನ್ನು ತೀವ್ರಗೊಳಿಸಲಾಗಿದೆ. ಸೂಕ್ಷ್ಮ ವಲಯಗಳಲ್ಲಿ ಸಂಚಾರವನ್ನು ನಿಯಂತ್ರಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಅಮೆರಿಕದ ಉಪಾಧ್ಯಕ್ಷ ಜೆ.ಡಿ.ವ್ಯಾನ್ಸ್‌ ನಾಲ್ಕು ದಿನಗಳ ಭೇಟಿ ಸಲುವಾಗಿ ಭಾರತದಲ್ಲಿರುವುದರಿಂದ ದೆಹಲಿ ಮಾತ್ರವಲ್ಲದೇ ಇತರ ನಗರಗಳಲ್ಲಿಯೂ ಭದ್ರತೆಯನ್ನು ಬಿಗಿ ಮಾಡಲಾಗಿದೆ.

Comments are closed.