Karnataka BJP: ಮುಂದಿನ ಬಿಜೆಪಿ ರಾಜ್ಯಾಧ್ಯಕ್ಷ ಯಾರೆಂದು ಸುಳಿವು ನೀಡಿದ ಹೈಕಮಾಂಡ್ !!

Karnataka BJP: ಬಿಜೆಪಿ ಹೈಕಮಾಂಡ್ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರನ್ನಾಗಿ ಯಾರನ್ನು ನೇಮಕ ಮಾಡುತ್ತದೆ ಎಂಬುದು ಕುತೂಹಲದ ವಿಚಾರವಾಗಿದೆ. ಆದರೆ ಈ ಬೆನ್ನಲ್ಲೇ ಕುತೂಹಲವನ್ನು ತಣಿಸುವ ಪ್ರಯತ್ನ ಮಾಡಿರುವ ಹೈಕಮಾಂಡ್ ಬಿ ವೈ ವಿಜಯೇಂದ್ರ ಅವರನ್ನೇ ರಾಜ್ಯಾಧ್ಯಕ್ಷರನ್ನಾಗಿ ಮುಂದುವರೆಸಿಕೊಂಡು ಹೋಗುವ ಸುಳಿವು ನೀಡಿದೆ.
ಹೌದು, ಹೈಕಮಾಂಡ್ ನಾಯಕರು ರಾಜ್ಯ ಬಿಜೆಪಿ ಘಟಕಕ್ಕೆ ಬಿ.ವೈ. ವಿಜಯೇಂದ್ರರನ್ನೇ ರಾಜ್ಯಾಧ್ಯಕ್ಷ ಸ್ಥಾನದಲ್ಲಿ ಮುಂದುವರೆಸುವ ಸುಳಿವನ್ನು ನೀಡಿದ್ದಾರೆ. ಅಂದಹಾಗೆ ಈ ತಿಂಗಳಾಂತ್ಯಕ್ಕೆ ಬಿಜೆಪಿ ರಾಷ್ಟ್ರೀಯಾಧ್ಯಕ್ಷರ ಆಯ್ಕೆಯಾಗುವ ಸಾಧ್ಯತೆ ಇದ್ದು, ಮನೋಹರ್ ಲಾಲ್ ಕಟ್ಟರ್, ಧರ್ಮೇಂದ್ರ ಪ್ರಧಾನ್ ಹಾಗೂ ಭೂಪೇಂದ್ರ ಯಾದವ್ ಮೂವರಲ್ಲಿ ಒಬ್ಬರನ್ನು ರಾಷ್ಟ್ರೀಯಾಧ್ಯಕ್ಷ ಸ್ಥಾನಕ್ಕೆ ನೇಮಕ ಮಾಡುವ ಸಾಧ್ಯತೆ ಇದೆ.
ರಾಷ್ಟ್ರೀಯಾಧ್ಯಕ್ಷರ ಆಯ್ಕೆ ಹೈಕಮಾಂಡ್ ಅಂಗಳದಲ್ಲಿ ಆಗುತ್ತಿದ್ದಂತೆ, ಇಲ್ಲಿ ರಾಜ್ಯಾಧ್ಯಕ್ಷರ ಆಯ್ಕೆಯಾಗಲಿದ್ದು, ವಿಜಯೇಂದ್ರರ ಹೆಸರು ಘೋಷಣೆ ಬಹುತೇಕ ನಿಶ್ಚಿತವಾಗಿದೆ ಎಂಬ ಮಾಹಿತಿ ಬಿಜೆಪಿ ಉನ್ನತ ಮೂಲಗಳಿಂದ ಲಭ್ಯವಾಗಿದೆ.
Comments are closed.