Hubballi: ಸಂಜೆ ನಂತರವಷ್ಟೇ ಸರಕಾರಿ ವೈದ್ಯರು ಖಾಸಗಿ ಪ್ರ್ಯಾಕ್ಟೀಸ್‌-ಶರಣಪ್ರಕಾಶ್‌

Share the Article

Hubballi: ಸರ್ಕಾರಿ ಮೆಡಿಕಲ್‌ ಕಾಲೇಜುಗಳಲ್ಲಿನ ವೈದ್ಯರು, ಪ್ರಾಧ್ಯಾಪಕರು ಸಂಜೆ 4ರಿಂದ ಮಾತ್ರ ಖಾಸಗಿ ಪ್ರಾಕ್ಟಿಸ್ ಮಾಡಬೇಕು. ಒಂದು ವೇಳೆ ಈ ಸಮಯದಲ್ಲಿ ವೈದ್ಯರು ಆಸ್ಪತ್ರೆ ಗಳಲ್ಲಿ ಇಲ್ಲದಿದ್ದಲ್ಲಿ ಅವರ ವೇತನ ಕಡಿತಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ ಹೇಳಿದರು.

ಹುಬ್ಬಳ್ಳಿಯ ಕೆಎಂಸಿಆರ್‌ಐಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆಗಳಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸಲಾಗಿದೆ. ಬಯೋಮೆಟ್ರಿಕ್ ಆಧರಿಸಿ ವೇತನ ಪಾವತಿ ಮಾಡುವಂತೆ ಸೂಚಿಸಲಾಗಿದೆ. ವೈದ್ಯರು ತಡವಾಗಿ ಕರ್ತವ್ಯಕ್ಕೆ ಹಾಜರಾದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಆಸ್ಪತ್ರೆಯಲ್ಲಿ ಔಷಧ ಕೊರತೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಅಗತ್ಯವಿರುವ ಔಷಧ ಖರೀದಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಇದಕ್ಕೆ ಸರ್ಕಾರದ ಆದೇಶಕ್ಕೆ ಕಾಯುವ ಅಗತ್ಯ ಇಲ್ಲ. ಔಷಧ ಖರೀದಿಗೆ ರೋಗಿ ಗಳನ್ನು ಖಾಸಗಿ ಔಷಧ ಅಂಗಡಿಗಳಿಗೆ ಕಳುಹಿಸ ಬಾರದು. ಯಾವುದೇ ಕಾರಣಕ್ಕೂ ಚೀಟಿ ಬರೆದು ಕೊಡಬಾರದು ಎಂಬ ಸೂಚನೆಯನ್ನೂ ನೀಡಲಾಗಿದೆ ಎಂದರು.

Comments are closed.