Delhi: ಪಾಕಿಸ್ತಾನಿ ಪ್ರಜೆಗಳು 48 ಗಂಟೆಗಳಲ್ಲಿ ಭಾರತವನ್ನು ತೊರೆಯಬೇಕು – ಕೇಂದ್ರ ಸರ್ಕಾರದಿಂದ ಖಡಕ್ ಆದೇಶ

Share the Article

Delhi: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದಂತ ಉನ್ನತ ಮಟ್ಟದ ಸಭೆಯಲ್ಲಿ ಪಾಕಿಸ್ತಾನಿ ಪ್ರಜೆಗಳು 48 ಗಂಟೆಯಲ್ಲಿ ಭಾರತ ತೊರೆಯುವಂತೆ ಆದೇಶಿಸಲು ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

ಹೌದು, ಕಾಶ್ಮೀರದಲ್ಲಿ ಪಹಲ್ಗಾಮ್‌ ಉಗ್ರರು ಅಮಾಯಕರನ್ನು ಬಲಿ ಪಡೆದು ಅಟ್ಟಹಾಸ ಮೆರೆದ ಬೆನ್ನಲ್ಲೇ ಪ್ರಧಾನಿ ಮೋದಿಯವರು ಸಭೆ ಕರೆದು ಈ ಮಹತ್ವದ ಆದೇಶವನ್ನು ಹೊರಡಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ರಾಯಭಾರಿಯನ್ನು ಗಡಿಪಾರು ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಜೊತೆಗೆ ಪಾಕಿಸ್ತಾನಿ ಪ್ರಜೆಗಳಿಗೆ ವೀಸಾ ನೀಡದಿರಲು ಕೂಡ ನಿರ್ಧರಿಸಲಾಗಿದೆ.

ಇದರೊಂದಿಗೆ ಅಟ್ಟಾರಿ-ವಾಘಾ ಗಡಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಚ್ಚಲಾಗುವಂತೆಯೂ ಕೇಂದ್ರ ಗೃಹ ಇಲಾಖೆಯಿಂದ ಆದೇಶಿಸಲಾಗಿದೆ. ಪಾಕಿಸ್ತಾನದಲ್ಲಿರುವಂತ ಭಾರತದ ರಾಯಬಾರಿಯನ್ನು ವಾಪಾಸ್ ಕರೆಸಿಕೊಳ್ಳುವಂತೆ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ.

Comments are closed.