Second Pu Exam-2: ದ್ವಿತೀಯ ಪಿಯು ಪರೀಕ್ಷೆ-2: ಉಚಿತ ಪ್ರಯಾಣಕ್ಕೆ ಅವಕಾಶ

Second Pu Exam: ಏ. 24ರಿಂದ ಮೇ 8ರವರೆಗೆ ನಡೆಯಲಿರುವ ದ್ವಿತೀಯ ಪಿಯು ಪರೀಕ್ಷೆ-2ಕ್ಕೆ ಹಾಜರಾಗುವ ವಿದ್ಯಾರ್ಥಿಗಳ ಉಚಿತ ಪ್ರಯಾಣಕ್ಕೆ ಬಿಎಂಟಿಸಿ ಅವಕಾಶ ಕಲ್ಪಿಸಿದೆ.
ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಬಸ್‌ಗಳಲ್ಲಿ ದ್ವಿತೀಯ ಪಿಯು ಪರೀಕ್ಷೆ-2 ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಬಹುದು. ಪರೀಕ್ಷಾ ಕೇಂದ್ರಗಳಿರುವ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲ ಬಸ್‌ಗಳು ಕಾರ್ಯಾಚರಿಸಲಿವೆ. ಅಗತ್ಯವಿದ್ದರೆ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಿಸುವುದಾಗಿ ಬಿಎಂಟಿಸಿ ಪ್ರಕಟಣೆ ತಿಳಿಸಿದೆ.
Comments are closed.