Mangaluru: ಮಂಗಳೂರು ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಕಂಡಕ್ಟರ್‌ನಿಂದ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೋ ವೈರಲ್

Mangaluru: ಮಂಗಳೂರಿನ ಮುಡಿಪು-ಸ್ಟೇಟ್‌ಬ್ಯಾಂಕ್ ಭಾಗದ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣ ವರದಿಯಾಗಿದೆ.
ಪ್ರಯಾಣಿಕರೊಬ್ಬರು ಈ ಟಘನೆಯ ವಿಡಿಯೋ ಮಾಡಿದ್ದು, ಇದು ವೈರಲ್ ಆಗಿದೆ. ಕೂಡಲೇ ಎಚ್ಚೆತ್ತುಕೊಂಡಿರುವ ಪೊಲೀಸರು ಆರೋಪಿ ಬಾಗಲಕೋಟೆ ಮೂಲದ ಪ್ರದೀಪ್ (40) ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಮುಡಿಪುವಿನಿಂದ ಸ್ಟೇಟ್‌ಬ್ಯಾಂಕ್‌ನತ್ತ ತೆರಳುತ್ತಿದ್ದ ಬಸ್ಸಿನಲ್ಲಿ ಎ.22 ರಂದು ನಡೆದಿದೆ. ಬಸ್‌ನಲ್ಲಿ ಯುವತಿ ನಿದ್ರೆಗೆ ಜಾರಿದ್ದು, ಆ ಸಂದರ್ಭದಲ್ಲಿ ಕಂಡಕ್ಟರ್ ಯುವತಿಗೆ ಕಿರುಕುಳ ನೀಡಿದ್ದಾನೆ.
Comments are closed.