PM Modi : ಊಹೆ ಮಾಡಲು ಸಾಧ್ಯವಿಲ್ಲ, ಆ ರೀತಿ ಉಗ್ರರನ್ನು ಸಾಯಿಸುತ್ತೇವೆ – ಗುಡುಗಿದ ಪ್ರಧಾನಿ ಮೋದಿ

Share the Article

PM Modi: ನಮ್ಮ ಸಾವು ಈ ರೀತಿ ಇರುತ್ತದೆ ಎಂದು ಊಹೆ ಕೂಡ ಮಾಡಲು ಸಾಧ್ಯವಿಲ್ಲ, ಆ ರೀತಿ ಉಗ್ರರನ್ನು ಹುಡುಕಿ ಹುಡುಕಿ ಸಾಯಿಸುತ್ತೇವೆ ಎಂದು ಬಿಹಾರದಲ್ಲಿ ಪ್ರಧಾನಿ ಮೋದಿ ಗುಡುಗಿದ್ದಾರೆ.

ಬಿಹಾರದಲ್ಲಿ ಮಾತನಾಡಿದ ಪ್ರಧಾನಿ ಮೋದಿ ‘ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ ಎಂದರು.

ಅಲ್ಲದೆ ಉಗ್ರರನ್ನು ಹೆಡೆಮುರಿ ಕಟ್ಟಿ ನಮ್ಮ ದೇಶದಿಂದ ಹೊರ ಹಾಕುವ ಸಮಯ ಬಂದಿದೆ. ಭಾರತೀಯರೆಲ್ಲರೂ ಒಗ್ಗಟ್ಟಿನಲ್ಲಿದ್ದರೆ ಉಗ್ರರ ಸೊಂಟ ಮುರುಯುವುದೇನೂ ಕಷ್ಟವಲ್ಲ. ಈ ಭೂಮಿಯಿಂದಲೇ ಅವರನ್ನು ಹೊರಗಟ್ಟುತ್ತೇವೆ. ಯಾರು ಮಾನವೀಯತೆ ನಂಬಿದ್ದಾರೋ ಅವರು ನಮ್ಮ ಜತೆಗಿದ್ದಾರೆ. ಸುಮ್ಮನೆ ಬಿಡುವ ಮಾತೇ ಇಲ್ಲ ಎಂದಿದ್ದಾರೆ.

Comments are closed.