Udupi: ಉಡುಪಿ: ಕ್ರಿಕೆಟ್ ಬೆಟ್ಟಿಂಗ್ ದಂಧೆ ಆರೋಪಿಗಳ ಬಂಧನ!

Udupi: ಅಕ್ರಮವಾಗಿ ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಉಡುಪಿ ನಗರ ಪೊಲೀಸರು ಬಂಧಿಸಿ ಅವರಲ್ಲಿ ಸೊತ್ತುಗಳನ್ನೆಲ್ಲಾ ವಶಪಡಿಸಿಕೊಂಡಿದ್ದಾರೆ.
ಕುಂದಾಪುರ ಕೊರ್ಗಿಯ ಸಂದೀಪ್ (34), ಕುಂದಾಪುರ ಬೇಳೂರಿನ ಶ್ರೀರಾಜ್ (33) ಹಾಗೂ ಮೊಳಹಳ್ಳಿಯ ಮಧುಕರ್ (44) ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.
ಆರೋಪಿಗಳಿಂದ ನಗದು, ಕಾರು ಮತ್ತು ಮೊಬೈಲ್ ಸೇರಿ ಒಟ್ಟು 12,16,700 ರೂ. ಮೊತ್ತದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
Comments are closed.