Tumakuru : ‘ಜೀನಿ’ ಮುಖ್ಯಸ್ಥ ದಿಲೀಪ್ ಕುಮಾರ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

Share the Article

Tumakuru : ರಾಜ್ಯಾದ್ಯಂತ ಖ್ಯಾತಿಗಳಿಸಿರುವ ಜೀನಿ ಪೌಡರ್ ಮಾಲೀಕರ ಮೇಲೆ ಆರೋಪ ಕೇಳಿ ಬಂದಿದೆ. ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಮಹಿಳೆಯೊಬ್ಬರು ದೀಲಿಪ್‌ ಕುಮಾರ್‌ ವಿರುದ್ದ ಆರೋಪಿಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೌದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳ (Physical abuse ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಹಿಳೆ ಮೇಘನಾ ಎಂಬುವವರು ದೂರು ನೀಡಿದ್ದಾರೆ.

ಹತ್ತು ತಿಂಗಳ ಹಿಂದೆ ನಾನು ಕೆಲಸಕ್ಕೆ ಸೇರಿದ್ದೆ, ಕಳೆದ 15 ದಿನಗಳಿಂದ ನನ್ನೊಂದಿಗೆ ಅಸಭ್ಯವಾಗಿ ಮಾತನಾಡಿ, ನನ್ನನ್ನು ಕೈ ಹಿಡಿದು ಎಳೆದು ಲೈಂಗಿಕ ಕಿರುಕುಳ ನೀಡಲು ಪ್ರಯತ್ನಿಸಿದ್ದಾರೆ ಎಂದು ಮಹಿಳೆ ಆರೋಪಿಸಿದ್ದು, ದೂರು ನೀಡಿದ್ದರೂ ಎಫ್‌ಐಆರ್ ದಾಖಲಿಸದೆ ಪೊಲೀಸರು ಕೇಸನ್ನು ಮುಚ್ಚಿ ಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಜೀನಿ ಸಂಸ್ಥೆಯ ಮಾಲೀಕ ದಿಲೀಪ್‌ಕುಮಾರ್ ಪ್ರತಿಕ್ರಿಯಿಸಿ ‘ಆರೋಪ ಮಾಡಿರುವ ಮಹಿಳೆ ಹತ್ತು ತಿಂಗಳ ಹಿಂದೆ ಜೀನಿ ಸಂಸ್ಥೆಗೆ ಕೆಲಸಕ್ಕೆ ಸೇರಿದ್ದು, ಸರಿಯಾಗಿ ಕಾರ್ಯ ನಿರ್ವಹಿಸದ ಕಾರಣ ಕೆಲಸದಿಂದ ತೆಗೆದುಹಾಕಲಾಗಿದೆ. ಹೀಗಾಗಿ ಮಂಗಳವಾರ ನಮ್ಮ ಸಂಸ್ಥೆಯ ಮುಂದೆ ಹತ್ತು ಜನರನ್ನು ಕರೆದುಕೊಂಡು ಬಂದು ಗಲಾಟೆ ಮಾಡಿದ್ದಾರೆ. ನಾನು ಮಹಿಳೆಗೆ ಯಾವುದೇ ಲೈಂಗಿಕ ಕಿರುಕಳ ನೀಡಿಲ್ಲ. ಕಳೆದ ಒಂದು ವರ್ಷದಿಂದ ನನ್ನ ಮೇಲೆ ವಿವಿಧ ರಾಜಕೀಯ ಮುಖಂಡರು ಹನಿ ಟ್ರ‍್ಯಾಪ್ ಮಾಡಲು ಸಾಕಷ್ಟು ಬಾರಿ ಪ್ರಯತ್ನಿಸಿ ವಿಫಲರಾಗಿದ್ದಾರೆ. ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಜನಪ್ರಿಯತೆ ಪಡೆಯುತ್ತಿರುವ ಹಿನ್ನೆಲೆಯಲ್ಲಿ ನನಗೆ ತೊಂದರೆ ನೀಡಿ, ಜೀನಿ ಸಂಸ್ಥೆಗೆ ಕೆಟ್ಟ ಹೆಸರು ತರಲು ಹಲವರು ಯತ್ನಿಸುತ್ತಿರುತ್ತಾರೆ’ ಎಂದು ತಿಳಿಸಿದ್ದಾರೆ.

Comments are closed.