Raichur: ವರದಕ್ಷಿಣೆ ಕಿರುಕುಳ ತಾಳಲಾರದೆ ಗರ್ಭಿಣಿ ಸಾವು ಆರೋಪ; ಪತಿ ಅರೆಸ್ಟ್‌

Share the Article

Raichur: ಗಂಡನ ಮನೆಯವರ ಕಿರುಕುಳ ಸಹಿಸಲಾರದೇ ಗರ್ಭಿಣಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿಂಧನೂರು ತಾಲೂಕಿನ ಬೂದಿಹಾಳ ಗ್ರಾಮದಲ್ಲಿ ನಡೆದಿದೆ.

ಚಾಮರಾಜನಗರ ಮೂಲದ ಅನುಪಮಾ (20) ಮೃತ ಗರ್ಭಿಣಿ.

ಅನುಪಮಾ ಹಾಗೂ ರಾಯಚೂರಿನ ಬೂದಿಹಾಳದ ನಾಗರಾಜ್‌ ಇವರಿಬ್ಬರೂ ಇನ್‌ಸ್ಟಾಗ್ರಾಂನಲ್ಲಿ ಪರಿಚಿತರಾಗಿ ಪ್ರೀತಿಸಿ 11 ತಿಂಗಳ ಹಿಂದೆ ಮದುವೆಯಾಗಿದ್ದರು. ಮೊದ ಮೊದಲಿಗೆ ಎಲ್ಲವೂ ಚೆನ್ನಾಗಿತ್ತು. ಆದರೆ ಇತ್ತೀಚೆಗೆ ನಾಗರಾಜ್‌ ಮನೆಯವರು ಬೇರೆ ಜಾತಿ, ವರದಕ್ಷಿಣೆ ತಂದಿಲ್ಲ ಎಂದು ಕಿರುಕುಳ ನೀಡುತ್ತಿದ್ದರು ಎಂಬ ಆರೋಪವಿದೆ.

ಮಗಳು ಗಂಡನ ಮನೆಯವರ ಹಿಂಸೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಮೃತಳ ತಂದೆ ಆರೋಪ ಮಾಡಿದ್ದು, ಪತಿ ನಾಗರಾಜ್‌ ಸೇರಿ 6 ಜನರ ವಿರುದ್ಧ ಸಿಂಧನೂರು ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಪತಿ ನಾಗರಾಜನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ಮಾಡಲಾಗಿದೆ.

Comments are closed.