Rikky Rai: ರಿಕ್ಕಿ ರೈ ಹತ್ಯೆ ಯತ್ನ ಪ್ರಕರಣ; ಗನ್‌ಮ್ಯಾನ್‌ಗೆ 10 ದಿನ ಪೊಲೀಸ್ ಕಸ್ಟಡಿ!

Rikky Rai: ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಬಿಡದಿಯಲ್ಲಿ ಹತ್ಯೆ ಯತ್ನ ನಡೆದಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ ಆರೋಪಿ ವಿಠಲ್‌ನನ್ನು ಪೊಲೀಸರು ಬಂಧನ ಮಾಡಿದ್ದು, ರಾಮನಗರ ನ್ಯಾಯಾಲಯಕ್ಕೆ ಹಾಜರುಪಡಿಸಿ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.
ಎ.18 ರಂದು ರಾಮನಗರದ ಬಿಡದಿ ಬಳಿ ಫೈರಿಂಗ್ ನಡೆದಿತ್ತು. ರಾತ್ರಿ 11.30 ರ ಸುಮಾರಿಗೆ ಕಾರಿಗೆ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ ರಿಕ್ಕಿ ಮೂಗು ಹಾಗೂ ಕೈಗಳಿಗೆ ಗಾಯವಾಗಿತ್ತು. ಮಣಿಪಾಲ ಆಸ್ಪತ್ರೆಯಲ್ಲಿ ರಿಕ್ಕಿ ರೈಯನ್ನು ದಾಖಲು ಮಾಡಲಾಗಿದೆ.
Comments are closed.