Tumakuru : ಲೈಂಗಿಕ ದೌರ್ಜನ್ಯ ಆರೋಪ – ‘ಜೀನಿ’ ಮಾಲೀಕ ದಿಲೀಪ್ ಕುಮಾರ್ ನಾಪತ್ತೆ

Tumakuru : ರಾಜ್ಯಾದ್ಯಂತ ಖ್ಯಾತಿಗಳಿಸಿರುವ ಜೀನಿ ಪೌಡರ್ ಮಾಲೀಕರ ಮೇಲೆ ಆರೋಪ ಕೇಳಿ ಬಂದಿದೆ. ಜೀನಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಕೆಲವು ಮಹಿಳೆಯೊಬ್ಬರು ದೀಲಿಪ್ ಕುಮಾರ್ ವಿರುದ್ದ ಆರೋಪಿಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಬೆನ್ನಲ್ಲೇ ದಿಲೀಪ್ ಕುಮಾರ್ ಅವರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.

ಹೌದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಯರಗುಂಟೆಯಲ್ಲಿರುವ ಜೀನಿ ಸಂಸ್ಥೆಯ ಮಾಲೀಕ ದಿಲೀಪ್ ಕುಮಾರ್ ಕಳೆದ ಆರು ತಿಂಗಳಿಂದ ಲೈಂಗಿಕ ಕಿರುಕುಳ (Physical abuse ನೀಡುತ್ತಿದ್ದಾರೆ ಎಂದು ಆರೋಪಿಸಿ ಕಳ್ಳಂಬೆಳ್ಳ ಪೊಲೀಸ್ ಠಾಣೆಗೆ ಮಹಿಳೆ ಮೇಘನಾ ಎಂಬುವವರು ದೂರು ನೀಡಿದ್ದಾರೆ. ದೂರು ದಾಖಲಾಗುತ್ತಿದ್ದಂತೆ ದಿಲೀಪ್ ಕುಮಾರ್ ಅವರು ನಾಪತ್ತೆಯಾಗಿದ್ದಾರೆ.
ತಾಲ್ಲೂಕಿನ ಯರಗುಂಟೆ ಗ್ರಾಮದಲ್ಲಿರುವ ಜೀನಿ ಕಂಪನಿಗೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಗೋಪಾಲ್, ಡಿವೈಎಸ್‌ಪಿ ಶೇಖರ್, ಸಿಪಿಐ ರಾಘವೇಂದ್ರ, ಪಿಎಸ್‌ಐ ರವೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು. ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ ಸಮಯದಲ್ಲಿ ಆರೋಪಿ ದಿಲೀಪ್ ಕುಮಾರ್ ಸ್ಥಳದಲ್ಲಿ ಹಾಜರಿರಲಿಲ್ಲ. ಅಲ್ಲಿದ್ದ ಸಿಬ್ಬಂದಿಯನ್ನು ವಿಚಾರಣೆ ನಡೆಸಿ ಘಟನೆಯ ಬಗ್ಗೆ ಮಾಹಿತಿ ಸಂಗ್ರಹಿಸಿದರು.
Comments are closed.