Bappanadu: ಬ್ರಹ್ಮರಥ ಕುಸಿತ ಪ್ರಕರಣ – ಕೋಪಗೊಂಡ ಪರಿವಾರ ದೈವಗಳು ಹೇಳಿದ್ದೇನು?

Share the Article

Bappanadu : ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ ತಾಲ್ಲೂಕಿನ ಬಪ್ಪನಾಡುನಲ್ಲಿರುವ ದುರ್ಗಾಪರಮೇಶ್ವರಿ ದೇವಸ್ಥಾನದ ಬ್ರಹ್ಮರಥೋತ್ಸವ ನಡೆಯುತ್ತಿದ್ದಾಗ ಅವಘಡವೊಂದು ಸಂಭವಿಸಿದ್ದು, ಅಮ್ಮನವರ ರಥದ ಮೇಲಿನ ಭಾಗ ಕುಸಿತ ಕಂಡಿತ್ತು. ಇದು ಕರಾವಳಿಯಾದ್ಯಂತ ಭಾರಿ ಸಂಚಲನಕ್ಕೆ ಕಾರಣವಾಗಿತ್ತು. ಇದೀಗ ಈ ಬೆನ್ನಲ್ಲೇ ಬಪ್ಪನಾಡು ದೇವಸ್ಥಾನದ ಪರಿವಾರ ದೈವಗಳು ಈ ವಿಚಾರಕ್ಕೆ ಸಂಬಂಧಿಸಿದಂತೆ ರೋಷಾವೇಶಗೊಂಡಿದ್ದು, ಭಕ್ತಾದಿಗಳಿಗೆ ಎಚ್ಚರಿಕೆಯನ್ನು ನೀಡಿದೆ.

ಹೌದು, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಳದ ರಥೋತ್ಸವದ ವೇಳೆ ತೇರು ಮುರಿದು ಬಿದ್ದ ಅವಘಡದ ಬಗ್ಗೆ ಸದ್ಯ ಜಾರಂದಾಯ ಮತ್ತು ಬಂಟ ದೈವಗಳಿಂದ ತಂತ್ರಿಗಳ ಎದುರಲ್ಲೇ ಆಕ್ರೋಶ ಹೊರಹಾಕಿವೆ. ಜಾತ್ರೋತ್ಸವದ ಬಳಿಕ ನಡೆದ ನೇಮೋತ್ಸವದ ವೇಳೆ ದೈವ ಆಕ್ರೋಶ ಹೊರಹಾಕಿದ್ದು, ಬಂಟ ದೈವದ ರೋಷಾವೇಶ ಕಂಡು ಭಕ್ತರು ಬೆಚ್ಚಿ ಬಿದಿದ್ದಾರೆ. ಎಲ್ಲರನ್ನೂ ಕಾಪಾಡಿದ್ದು ನಾನೇ, ತಿದ್ದಿಕೊಳ್ಳದಿದ್ದರೆ ಇನ್ನಷ್ಟು ಅಪಾಯ ಎದುರಾಗಲಿದೆ ಎಂದು ದೈವ ಎಚ್ಚರಿಕೆ ನೀಡಿದೆ.

ಅಲ್ಲದೆ ಒಂದು ಜೀವಕ್ಕೂ ಗಾಯ ಆಗೋದಕ್ಕೆ ಬಿಟ್ಟಿಲ್ಲ ನಾನು. ಎಷ್ಟು ಜೀವಕ್ಕೆ ಹಾನಿ‌ ಆಗುತ್ತಿತ್ತು? ಮುಂದಕ್ಕೆ ಎಲ್ಲವನ್ನೂ ಸರಿ ಮಾಡುತ್ತೇನೆ. ತುಂಬಾ ವಿಷಯಗಳು ಇದೆ. ನನಗಿರುವ ಅಧಿಕಾರ ಬೇರೆ ಯಾವ ದೈವಕ್ಕೂ ಇಲ್ಲ. ಪ್ರಶ್ನಾಚಿಂತನೆ ಹಾಕಲೇಬೇಕಾಗಿದೆ. ಆ ಸಂದರ್ಭದಲ್ಲಿ ನಿಮ್ಮ ನಾಲಗೆಯ ಮೂಲಕ ನಾನು ಮಾತನಾಡುತ್ತೇನೆ. ಪುನಃ ಬ್ರಹ್ಮಕಲಶ ಆಗಿ ಹೊಸ ಬ್ರಹ್ಮ ರಥೋತ್ಸವದಲ್ಲಿ ರಥೋತ್ಸವ ಆಗಲಿ. ಆ ಸಂದರ್ಭದಲ್ಲಿ ಯಾರು ತಡೆಯುತ್ತಾರೆಂದು ನಾನು ನೋಡುತ್ತೇನೆ. ಯಾವ ರೀತಿ ಹೊಂದಾಣಿಕೆ ಮಾಡಿಕೊಂಡು ಹೋಗಬೇಕೆಂಬ ಲೆಕ್ಕಾಚಾರ ನನಗೆ ಬಿಡಿ. ಈಗ ಒಳ್ಳೆ ರೀತಿಯಲ್ಲಿ ವಾಪಾಸು ಹೋಗುತ್ತೇನೆ. ದುರ್ಗಾಪರಮೇಶ್ವರಿಯ ಕಣ್ಣೀರು ಒರೆಸಿ ಕೂರಿಸಿದ್ದೇನೆ. ಅವರು ದುಃಖದಲ್ಲಿದ್ದರು ಹೋಗಿ ಅವರ ಪಾದ ಹಿಡಿಯುತ್ತೇನೆ. ಮುಂದಿನ ಭವಿಷ್ಯವನ್ನು ಒಳ್ಳೆದು ಮಾಡುತ್ತೇನೆ. ಯಾರಿಗೂ ಏನು ತೊಂದರೆಯಾಗಲ್ಲ ಎಂಬ ಭಾಷೆಯನ್ನು ಅವರಿಗೆ ನೀಡುತ್ತೇನೆ ಎಂದು ದೈವ ನುಡಿದಿದೆ.

Comments are closed.