High Court : ಜೈಲುವಾಸ ಅನುಭವಿಸಿದ ಸರ್ಕಾರಿ ನೌಕರನಿಗೆ ಮತ್ತೆ ಸೇವೆಗೆ ಅವಕಾಶವಿಲ್ಲ – ಹೈಕೋರ್ಟ್ ಮಹತ್ವದ ತೀರ್ಪು

High Court : ಸರ್ಕಾರಿ ನೌಕರ ಕ್ರಿಮಿನಲ್ ಕೇಸ್ ಗಳಲ್ಲಿ ದೋಷಿಯಾಗಿ ಜೈಲುವಾಸವನ್ನು ಅನುಭವಿಸಿದರೆ ಆತನನ್ನು ಮತ್ತೆ ಸೇವೆಗೆ ಸೇರಿಕೊಳ್ಳಿ ಸೇರಿಸಿಕೊಳ್ಳಲು ಅವಕಾಶವಿರುವುದಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ.
ಬೆಂಗಳೂರಿನ ನಗರ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲರ ಕಚೇರಿಯಲ್ಲಿ ದ್ವಿತೀಯ ದರ್ಜೆ ಸಹಾಕರಾಗಿದ್ದಂತ ನಂಜೇಗೌಡ ಎಂಬುವರನ್ನು 2001ರಲ್ಲಿ ನಡೆದಿದ್ದಂತ ಹಲ್ಲೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿದ್ದರು. ಹೀಗಾಗಿ ಅವರನ್ನು ಉದ್ಯೋಗದಿಂದ ವಜಾಗೊಳಿಸಲಾಗಿತ್ತು. ಈ ವಜಾ ಆದೇಶವನ್ನು ಪ್ರಶ್ನಿಸಿ ನಂಜೇಗೌಡ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ಕ್ರಿಮಿನಲ್ ಪ್ರಕರಣಗಳಲ್ಲಿ ದೋಷಿಯಾಗಿ ಜೈಲು ಶಿಕ್ಷೆಗೆ ಒಳಗಾದ ಸರ್ಕಾರಿ ನೌಕರ ಪುನಹ ಸೇವೆಯಲ್ಲಿ ಮುಂದುವರೆಯಲು ಅವಕಾಶವಿಲ್ಲ ಎಂದು ವಾಜಗೊಳಿಸಿದೆ.
Comments are closed.