Mangaluru: ದೇಶಕ್ಕೆ ಮಾಡಿದ ಅಪಮಾನ’ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಸಂಸದ ಕ್ಯಾ. ಚೌಟ ಆಕ್ರೋಶ!

Mangaluru: ಪಹಲ್ಗಾಮ್‌ನಲ್ಲಿ ಪ್ರವಾಸಿಗರ ಮೇಲೆ ನಡೆದ ರಣಹೇಡಿ ಭಯೋತ್ಪಾದಕ ದಾಳಿಯ ವಿರುದ್ದ ದೇಶವೇ ಒಗ್ಗಟ್ಟಿನಿಂದ ನಿಂತಿರುವಾಗ ಸಾರ್ವಜನಿಕ ಸ್ಥಾನದಲ್ಲಿರುವ ಸಿಎಂ ಸಿದ್ದರಾಮಯ್ಯನವರು ಸಂವೇದನೆ ರಹಿತರಂತೆ, ಬೇಜವಾಬ್ದಾರಿಯುತ, ರಾಜಕೀಯ ಅಭದ್ರತೆಯಿಂದ ಕೂಡಿದ ಹೇಳಿಕೆ ನೀಡಿರುವುದು ನಿಜಕ್ಕೂ ವಿಷಾದನೀಯ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಹೇಳಿದ್ದಾರೆ.

“ಪಾಕಿಸ್ತಾನದ ಜೊತೆ ಯುದ್ಧ ಸಾರುವ ಅಗತ್ಯ ಇಲ್ಲ” ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆ ಖಂಡಿಸಿರುವ ಕ್ಯಾ. ಚೌಟ ಅವರು, ಪಹಲ್ಗಾಮ್ ನಲ್ಲಿ ನಡೆದ ಘಟನೆ ನಮ್ಮ ರಾಷ್ಟ್ರದ ಮೇಲೆ ನಡೆದ ಹೇಡಿತನ ದಾಳಿ. ಜವಾಬ್ದಾರಿಯುತ ಸ್ಥಾನದಲ್ಲಿ ಅದರಲ್ಲೂ ಮುಖ್ಯಮಂತ್ರಿ ಸ್ಥಾನದಲ್ಲಿದ್ದುಕೊಂಡು ‘ಭಯೋತ್ಪಾದಕ ಚಟುವಟಿಕೆಯಲ್ಲಿ ತೊಡಗಿರುವವರನ್ನು ಶಿಕ್ಷಿಸುವುದು ಬೇಡ ನಮ್ಮ ಭದ್ರತೆಯನ್ನು ಬಲಪಡಿಸಿ’ ಎಂಬ ರೀತಿಯ ಹೇಳಿಕೆ ನೀಡಿರುವುದು ಅಕ್ಷಮ್ಯ.
ಇಂತಹ ಹೇಳಿಕೆಗಳು ದಾಳಿಯಲ್ಲಿ ಹುತಾತ್ಮರಾದ ನಮ್ಮ ಭದ್ರತಾ ಸಿಬ್ಬಂದಿಯ ಶೌರ್ಯ ಮತ್ತು ಬಲಿದಾನ ಕಡೆಗಣಿಸಿದಂತಾಗುತ್ತದೆ. ಇದನ್ನು ಬಲವಾಗಿ ಖಂಡಿಸಬೇಕು ಎಂದು ಸಂಸದ ಕ್ಯಾ. ಚೌಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Comments are closed.