Kolara: ಬೆಟ್ಸ್ ಕಟ್ಟಿ ನೀರು ಹಾಕದೆ 5 ಬಾಟಲಿ ಮದ್ಯ ಸೇವನೆ – ಯುವಕ ಸಾವು!!

Share the Article

Kolara: ಪಾರ್ಟಿ ಒಂದರಲ್ಲಿ ಬೆಡ್ಸ್ ಕಟ್ಟಿ ನೀರು ಹಾಕದೆ ಐದು ಬಾಟಲಿ ಮದ್ಯ ಸೇವಿಸಿದ ಯುವಕನೊಬ್ಬ ಮೃತ ಪಟ್ಟ ವಿಚಿತ್ರ ಪ್ರಕರಣ ಬೆಳಕಿಗೆ ಬಂದಿದೆ.

ಹೌದು, ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಪೂಜಾರಹಳ್ಳಿಯಲ್ಲಿ ಕಾರ್ತಿಕ್ (21) ಎಂಬ ಯುವಕ ಹಣದ ಆಸೆಗಾಗಿ ಬೆಟ್ಟಿಂಗ್ ಕಟ್ಟಿ ನೀರು ಬೆರಸದೆ ಮದ್ಯ ಸೇವನೆ ಮಾಡಿ ಪ್ರಾಣ ಕಳೆದುಕೊಂಡಿದ್ದಾನೆ. ಬೇಸರದ ಸಂಗತಿ ಏನೆಂದರೆ ಈತ ಕೇವಲ ಒಂದು ವರ್ಷದ ಹಿಂದೆ ಮದುವೆಯಾಗಿದ್ದ.

ಎದುರಾಳಿ ವ್ಯಕ್ತಿಯೊಂದಿಗೆ 10 ಸಾವಿರ ರೂ. ಹಣಕ್ಕೆ ಐದು ಬಾಟಲ್ ಮದ್ಯಕ್ಕೆ ಒಂದು ಹನಿ ನೀರನ್ನೂ ಬೆರೆಸದೇ ಕುಡಿಯುವುದಾಗಿ ಹೇಳಿ ಸೇವಿಸಿದ್ದಾನೆ. ನಂತರ, ಮದ್ಯದ ಪ್ರಮಾಣ ಹೆಚ್ಚಾಗಿದ್ದರಿಂದ ತೀವ್ರ ಅಸ್ವಸ್ಥನಾದ ಕಾರ್ತಿಕ್, ನಾನು ಬದುಕುವುದಿಲ್ಲ ಆಸ್ಪತ್ರೆಗೆ ಸೇರಿಸಿ ನನ್ನ ಜೀವ ಉಳಿಸಿ ಎಂದು ಬೇಡಿಕೊಂಡಿದ್ದಾನೆ. ಕೂಡಲೇ, ಆತನ ಸ್ನೇಹಿತರು ಮುಳಬಾಗಿಲು ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಕೊಡಿಸಲು ಮುಂದಾಗಿದ್ದಾರೆ. ಆದರೆ, ಕಾರ್ತಿಕ್ ದೇಹ ಚಿಕಿತ್ಸೆಗೂ ಸ್ಪಂದಿಸದ ಕಾರಣ, ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

Comments are closed.