Kadaba: ಚಲಿಸುತ್ತಿದ್ದ ಕಾರಿನ ಬಾಗಿಲು, ಮೇಲ್ಭಾಗದಲ್ಲಿ ಕುಳಿತು ಯುವಕರಿಂದ ರಂಪಾಟ!

Share the Article

Kadaba: ಚಲಿಸುತ್ತಿದ್ದ ಕಾರಿನ ಬಾಗಿಲು ಮತ್ತು ಕಾರಿನ ಮೇಲ್ಭಾಗದಲ್ಲಿ ಕುಳಿತು ರಂಪಾಟ ಮಾಡಿ, ಇತರ ವಾಹನ ಸವಾರರಿಗೆ ತೊಂದರೆ ಉಂಟು ಮಾಡಿದ ಘಟನೆ ಎ.27 ರ ರಾತ್ರಿ ಕಡಬದಲ್ಲಿ ನಡೆದಿರುವ ಕುರಿತು ವರದಿಯಾಗಿದೆ.

ಕಡಬ-ಉಪ್ಪಿನಂಗಡಿ ರಾಜ್ಯ ರಸ್ತೆಯಲ್ಲಿ ಕಡಬದಿಂದ ಅಲಂಕಾರುವರೆಗೆ 15 ಕಿ.ಮೀ. ಉದ್ದಕ್ಕೂ ಹಲವು ಕಾರು ಮತ್ತು ದ್ವಿಚಕ್ರ ವಾಹನಗಳಲ್ಲಿ ಕರ್ಕಶವಾಗಿ ನಿರಂತರ ಹಾರ್ನ್‌ ಹಾಕಿ, ಸಂಚಾರ ನಿಯಮ ಉಲ್ಲಂಘನೆ ಮಾಡಿ ವಾಹನ ಚಲಾಯಿಸಿರುವ ಆರೋಪ ಸಾರ್ವಜನಿಕರಿಂದ ಕೇಳಿ ಬಂದಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಪುಂಡಾಟ ಮೆರೆದ ಯುವಕರ ವಿಡಿಯೋ ವೈರಲ್‌ ಆಗಿದೆ. ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

Comments are closed.