Karnataka SSLC Results: ಮೇ 3 ರಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ ಸಾಧ್ಯತೆ!

SSLC Result: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ನಡೆಸಿದ್ದ 2025 ನೇ ಸಾಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಮೇ.3 ರಂದು ಪ್ರಕಟಗೊಳ್ಳುವ ಸಾಧ್ಯತೆ ಇದೆ. ಈ ಕುರಿತು ಕೆಎಸ್‌ಇಎಬಿ (KSEAB) ಅಧಿಕೃತ ಘೋಷಣೆ ಮಾಡಿಲ್ಲ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಮಾ.21 ರಿಂದ ಎಪ್ರಿಲ್ 4 ರಂದು ನಡೆದಿತ್ತು. ಮೌಲ್ಯಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗಿದ್ದು, ಮೇ.3 ರಂದು ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಎಸ್‌ಎಸ್‌ಎಲ್‌ಸಿ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ನೋಡುವ ರೀತಿ ಇಲ್ಲಿದೆ;
https://karresults.nic.in/ ಮತ್ತು kseab.karnataka.gov.in ಭೇಟಿ ನೀಡಿ.
‘SSLC ಫಲಿತಾಂಶ 2025’ ಲಿಂಕ್ ಅನ್ನು ಕ್ಲಿಕ್ ಮಾಡಬೇಕು.
SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ಮೀಟ್ ಮೇಲೆ ಕ್ಲಿಕ್ ಮಾಡಿ.
ನಂತರ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನಗೊಳ್ಳುತ್ತದೆ.
ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
Comments are closed.