ದಾರಿ ಮಧ್ಯೆ ಬಸ್ ನಿಲ್ಲಿಸಿ ನಮಾಜ್ ಶುರುವಿಟ್ಟ KSRTC ಡ್ರೈವರ್, ತನಿಖೆಗೆ ಆದೇಶ

ಹುಬ್ಬಳ್ಳಿ: ಸರ್ಕಾರಿ ಬಸ್ಸಿನಲ್ಲಿ ತುಂಬಿದ ಪ್ರಯಾಣಿಕರು ಇರುವಾಗಲೇ ಬಸ್ ಅನ್ನು ಮಾರ್ಗ ಮಧ್ಯೆ ನಿಲ್ಲಿಸಿ ಬಸ್ ನಲ್ಲೇ ಚಾಲಕನೋರ್ವ ನಮಾಜ್ ಮಾಡುತ್ತಿರುವ ವೀಡಿಯೊ ವೈರಲ್ ಆಗಿದೆ.
ಮೊನ್ನೆ ಏಪ್ರಿಲ್ 29ರಂದು ಹುಬ್ಬಳ್ಳಿಯಿಂದ ಹೊರಟು ಹಾವೇರಿಗೆ ತೆರಳುತ್ತಿದ್ದ ಕೆಎಸ್’ಆರ್’ಟಿಸಿ ಬಸ್ ನಿಲ್ಲಿಸಿ ಚಾಲಕ ಬಸ್’ನಲ್ಲೇ ನಮಾಜ್ ಮಾಡಿದ್ದಾನೆ. ಈ ವಿಡಿಯೊವನ್ನು ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಲಾತಾಣಗಳಲ್ಲಿ ಹರಿಬಿಟ್ಟಿದ್ದಾರೆ.
ಈ ವಿಡಿಯೋ ಈಗ ವ್ಯಾಪಕ ವೈರಲ್ ಆಗಿ ಚಾಲಕನ ನಡೆಗೆ ಆಕ್ರೋಶಗಳು ವ್ಯಕ್ತವಾದ.ಹಿನ್ನೆಲೆಯಲ್ಲಿ ಚಾಲಕನ ವಿರುದ್ದ ಕ್ರಮ ಕೈಗೊಳ್ಳಬೇಕು ಎಂಬ ಕೂಗು ಕೇಳಿ ಬಂದಿತ್ತು. ಬಸ್ ನಲ್ಲಿ ಪ್ರಯಾಣಿಕರನ್ನ ಇದ್ದ ಸಂದರ್ಭ ಕರ್ತವ್ಯದ ಅವಧಿಯಲ್ಲಿಯೇ ಬಸ್ ಡ್ರೈವರ್ ಕಂ ಕಂಡಕ್ಟರ್ ಸೀಟಿನ ಮೇಲೆ ಕುಳಿತು ನಮಾಜ್ ಮಾಡಿದ್ದಾರೆ.
ಈ ವಿಡಿಯೋ ಸಾಕಷ್ಟು ವೈರಲ್ ಆದಾಗ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕಿ ಪ್ರಿಯಾಂಗ ಎಂ. ಅವರಿಗೆ ಪತ್ರ ಬರೆದು ತನಿಖೆಗೆ ಆದೇಶ ನೀಡಿದ್ದಾರೆ.
Comments are closed.