R Ashok: ಸಿಎಂ ಸಿದ್ದರಾಮಯ್ಯ ಅಧಿಕಾರದಲ್ಲಿದ್ದರೆ ಹಿಂದೂ ಕಾರ್ಯಕರ್ತರ ಹತ್ಯೆ-ಆರ್.ಅಶೋಕ್ ‌

Share the Article

R Ashok: ರಾಜ್ಯದಲ್ಲಿ ಲವ್‌ ಜಿಹಾದ್‌ ಪ್ರಕರಣ ನಡೆದಾಗ, ಪಾಕಿಸ್ತಾನ ಜಿಂದಾಬಾದ್‌ ಎಂದು ಘೋಷಣೆ ಕೂಗಿದಾಗ ಕಾಂಗ್ರೆಸ್‌ ಸರಕಾರ ಕಠಿಣ ಕ್ರಮ ವಹಿಸಿದ್ದರೆ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿಯ ಹತ್ಯೆ ಆಗುತ್ತಿರಲಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಕೊಲೆ ಮೂಲಕ ಮಂಗಳೂರಿನ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಮಂಗಳೂರು ಬಂದ್‌ ಮಾಡಲಾಗಿದ್ದು, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ 2013 ರಲ್ಲಿ ಅಧಿಕಾರದಲ್ಲಿದ್ದಾಗ 36 ಹಿಂದೂ ಕಾರ್ಯಕರ್ತರ ಹತ್ಯೆಯಾಗಿತ್ತು. ಪಾಪ್ಯುಲರ್‌ ಫ್ರಂಟ್‌ ಮೊದಲಾದ ಸಂಘಟನೆಗಳು ಈ ಕೃತ್ಯ ಮಾಡಿದೆ. ಇನ್ನೆಷ್ಟು ಹಿಂದೂ ಕಾರ್ಯಕರ್ತರ ಬಲಿಯಾಗಲಿ ಎಂದು ಸಿಎಂ ಸಿದ್ದರಾಮಯ್ಯ ಬಯಸುತ್ತಾರೋ ಗೊತ್ತಿಲ್ಲ. ಪಾಕಿಸ್ತಾನ ಜಿಂದಾಬಾದ್‌ ಎಂದಾಗ ಕಠಿಣ ಕ್ರಮ ಕೈಗೊಂಡಿದ್ದರೆ ಈ ಕೃತ್ಯ ನಡೆಯುತ್ತಿರಲಿಲ್ಲ ಎಂದು ಹೇಳಿದರು.

ಸುಹಾಸ್‌ ಎಲ್ಲೆಲ್ಲಿ ಓಡಾಡುತ್ತಾನೆ. ಆತನ ಬಳಿ ಆಯುಧ ಇಲ್ಲವೆಂದು ತಿಳಿದಿದ್ದು ಹೇಗೆ? ಈ ಕುರಿತು ಪೊಲೀಸ್‌ ಇಲಾಖೆಯಿಂದಲೇ ಮಾಹಿತಿ ಸೋರಿಕೆಯಾಗಿರುವ ಅನುಮಾನವಿದೆ. ಸಚಿವ ದಿನೇಶ್‌ ಗುಂಡೂರಾವ್‌ ಅವರಿಗೆ ಪಾಕಿಸ್ತಾನ ಜಿಂದಾಬಾದ್‌ ಎಂದರೆ ಏನೂ ಅನ್ನಿಸುವುದಿಲ್ಲ. ಅವರದ್ದು ಎಮ್ಮೆ ಚರ್ಮ. ಪೊಲೀಸ್‌ ಇಲಾಖೆ ಕಾಂಗ್ರೆಸ್‌ ಪಕ್ಷದ ಇಲಾಖೆಯಾಗಿದೆ ಎಂದು ಟೀಕೆ ಮಾಡಿದರು.

ಸಿಎಂ ಸಿದ್ದರಾಮಯ್ಯ ಅವರ ಅವಧಿಯಲ್ಲಿ ಪರೇಶ್‌ ಮೇಸ್ತಾ, ಪ್ರಶಾಮತ್‌ ಪೂಜಾರಿ, ಶರತ್‌ ಮಡಿವಾಳ, ರುದ್ರೇಶ್‌ ಅವರಂತಹ ಹಿಂದೂ ಕಾರ್ಯಕರ್ತರ ಕೊಲೆ ನಡೆದಿತ್ತು. ಈಗ ಸುಹಾಸ್‌ ಶೆಟ್ಟಿ ಕೊಲೆಗೂ ಕಾಂಗ್ರೆಸ್‌ ಸರಕಾರದ ತುಷ್ಟೀಕರಣವೇ ಕಾರಣ. ಕರ್ನಾಟಕವನ್ನು ಪಾ ʼಕೈʼ ಸ್ತಾನ ಮಾಡಲು ಸಿದ್ದರಾಮಯ್ಯ ಸರಕಾರ ಹೊರಟಿದೆ. ಹಿಂದೂಗಳು ತಕ್ಕ ಪಾಠ ಕಲಿಸುವ ದಿನ ದೂರವಿಲ್ಲ ಎಂದು ವಿಪಕ್ಷ ನಾಯಕ ಆರ್.‌ ಅಶೋಕ್‌ ವಾಗ್ದಾಳಿ ಮಾಡಿದ್ದಾರೆ.

Comments are closed.