Sringeri:ಪಹಲ್ಗಾಮ್‌ನಲ್ಲಿ , ನಡೆದ ದಾಳಿಯಲ್ಲಿ ಮೃತಪಟ್ಟಿರುವ 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರ!

Share the Article

Sringeri: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ (Sringeri) ಶಾರದಾ ಮಠ ಕಿರಿಯ ಶ್ರೀ ವಿಧುಶೇಖರ ಶ್ರೀಗಳು ಕಾಶ್ಮೀರದ ಪಹಲ್ಗಾಮ್‌ ಬಳಿ ಹಿಂದುಗಳ ಮೇಲೆ ನಡೆದ ಭಯೋತ್ಪಾದಕ ದಾಳಿಯನ್ನ ಖಂಡಿಸಿದ್ದು, ಮೃತಪಟ್ಟಿರುವ 26 ಕುಟುಂಬಗಳಿಗೆ ಶೃಂಗೇರಿ ಮಠದಿಂದ ತಲಾ 2 ಲಕ್ಷ ರೂ. ಪರಿಹಾರವನ್ನು ಪ್ರಸಾದ ರೂಪದಲ್ಲಿ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

ಉಗ್ರರ ದಾಳಿಗೆ ತಮ್ಮ ಮನೆಯವರನ್ನು ಕಳೆದುಕೊಂಡ ನೋವಿನಲ್ಲಿ 26 ಕುಟುಂಬಸ್ಥರು ಇದ್ದಾರೆ. ಹಿಂದೂಗಳ ಜೊತೆ ಹಿಂದೂಗಳೇ ನಿಲ್ಲಬೇಕು. ಹಾಗಾಗಿ ಶೃಂಗೇರಿ ಶಾರದಾ ಪೀಠದ ವತಿಯಿಂದ ಪ್ರತಿ ಕುಟುಂಬಕ್ಕೆ 2 ಲಕ್ಷ ರೂ. ಹಣವನ್ನು ಪ್ರಸಾದದ ರೂಪದಲ್ಲಿ ನೀಡುತ್ತಿದ್ದೇವೆ. ದುಃಖದಲ್ಲಿರುವ ಕುಟುಂಬದಲ್ಲಿ ಸಂತೋಷ, ಶ್ರೇಯಸ್ಸು ವೃದ್ಧಿಸಲಿ ಎಂದು ಹೇಳಿದ್ದಾರೆ.

Comments are closed.