Mangaluru: ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ಭಯಾನಕ ವಿಡಿಯೋ ವೈರಲ್

Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ಹೊಂಚು ಹಾಕಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಇದೀಗ ಈ ಭಯಾನಕ ಕೃತ್ಯದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ರಾಜ್ಯದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ.ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಶಾಂತ್ ಶೆಟ್ಟಿ ಹತ್ಯೆ ಖಂಡನೀಯ.@siddaramaiah ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. 1/2 pic.twitter.com/vRJpiElUid
— Sunil Kumar Karkala (@karkalasunil) May 1, 2025
ಫಾಜಿಲ್ ಕೊಲೆ ಪ್ರಕರಣದ ಪ್ರಮುಖ ಆರೋಪಿ ಮತ್ತು ರೌಡಿಶೀಟರ್ ಸುಹಾಸ್ ಶೆಟ್ಟಿಯನ್ನು ಗುರುವಾರ ರಾತ್ರಿ 8.27 ರ ಸುಮಾರಿಗೆ ಮಂಗಳೂರಿನ ಹೊರವಲಯದ ಬಜ್ಪೆ ಠಾಣೆ ವ್ಯಾಪ್ತಿಯ ಕಿನ್ನಿಪದವು ಎಂಬಲ್ಲಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಈ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.
Comments are closed.