Mangaluru : ಸುಹಾಸ್ ಶೆಟ್ಟಿ ಕೊಲೆ ಪ್ರಕರಣ – ಹಂತಕರ ಸ್ಕೆಚ್ ಬಿಚ್ಚಿಟ್ಟ ಪೊಲೀಸ್ ಕಮಿಷನರ್ !!

Mangaluru : ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಹಾಗೂ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದ ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿಯನ್ನು ನಾಲ್ವರು ಹೊಂಚು ಹಾಕಿ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿದ್ದಾರೆ. ಇದೀಗ ಪೊಲೀಸ್ ಕಮಿಷನರ್ ಅವರು ಹಂತಕರ ಸ್ಕೆಚ್ ಅನ್ನು ಬಿಚ್ಚಿಟ್ಟಿದ್ದಾರೆ.

ಈ ಸಂಬಂಧ ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದು ಸುಹಾಸ್ ಇನೋವಾ ಕಾರಿನಲ್ಲಿ ಸಹಚರರ ಜೊತೆ ತೆರಳುತ್ತಿದ್ದ. ಆ ವೇಳೆ ಗೂಡ್ಸ್ ವಾಹನ, ಕಾರಿನಲ್ಲಿ ಬಂದು ಸುಹಾಸ್ ಕಾರು ಅಡ್ಡಗಟ್ಟಿದ್ದಾರೆ. ಬಳಿಕ ಮಾರಕಾಸ್ತ್ರಗಳಿಂದ ಸುಹಾಸ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ. ಕೂಡಲೇ ಆಸ್ಪತ್ರೆಗೆ ದಾಖಲಿಸಿತ್ತಾದೂರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಸುಹಾಸ್ ಶೆಟ್ಟಿಯನ್ನೇ ಟಾರ್ಗೆಟ್ ಮಾಡಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದರು.
ಅಂದಹಾಗೆ 2022 ರ ಜುಲೈ 28 ರಂದು ಸುರತ್ಕಲ್‌ನಲ್ಲಿ ಮೊಹಮ್ಮದ್ ಫಾಜಿಲ್ ಎಂಬ ಯುವಕನ ಬರ್ಬರ ಹತ್ಯೆ ನಡೆದಿತ್ತು. ಈ ಹತ್ಯೆಯು ಅದಕ್ಕೂ ಮುನ್ನ ನಡೆದಿದ್ದ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ನಡೆದಿದೆ ಎಂದು ಆರೋಪಿಸಲಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿಯಾಗಿದ್ದನು. ಇದೀಗ ಸುರತ್ಕಲ್‌ನ ಫಾಜಿಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹಾಗೂ ರೌಡಿ ಶೀಟರ್ ಆಗಿರುವ ಸುಹಾಸ್ ಶೆಟ್ಟಿಯನ್ನು ಕೊಚ್ಚಿ ಕೊಲೆ ಮಾಡಲಾಗಿದೆ.
Comments are closed.