Mangaluru: “ಕಾಂಗ್ರೆಸ್ ಸರಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ, ಹತ್ಯೆ ಖಂಡನೀಯ”-ಶಾಸಕ ವಿ. ಸುನಿಲ್ ಕುಮಾರ್ ಆಕ್ರೋಶ!

Mangaluru: ಮಂಗಳೂರಿನಲ್ಲಿ (Mangaluru) ಬಜ್ಪೆ ಕಿನ್ನಿ ಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಸ್ನೇಹಿತರೊಂದಿಗೆ ಬರುತ್ತಿದ್ದ ವೇಳೆ ಕಾರಿಗೆ ಮಿನಿ ಟೆಂಪೋ ಗುದ್ದಿಸಿ ಬಳಿಕ ಬರ್ಬರವಾಗಿ ಕೊಲೆ ಮಾಡಲಾಗಿದೆ.

ಈ ಘಟನೆಯ ಕುರಿತು ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದು, ದಕ್ಷಿಣಕನ್ನಡ ಜಿಲ್ಲೆ ಬಂದ್ ಕರೆ ನೀಡಲಾಗಿದೆ. ಇದೀಗ ಪ್ರಕರಣದ ಕುರಿತು ಶಾಸಕ ವಿ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದು ಬಿದ್ದಿದೆ. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಹಿಂದೂ ಕಾರ್ಯಕರ್ತರಿಗೆ ರಕ್ಷಣೆ ಇಲ್ಲ. ಪಾಕಿಸ್ತಾನ ಜಿಂದಾಬಾದ್ ಎಂದವರ ಪರ ಕಾಳಜಿ ತೋರುವ ಸರಕಾರ ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದ್ದಾರೆ.
Comments are closed.