Suhas Shetty Murder Case: ಪೆಹಲ್ಗಾಂ ದಾಳಿ, ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ಚಿಕ್ಕಮಗಳೂರು ಬಂದ್!

Suhas Shetty Murder Case: ಜಮ್ಮು ಕಾಶ್ಮೀರದ ಪೆಹಲ್ಗಾಂನಲ್ಲಿ ನಡೆದ ಉಗ್ರರ ದಾಳಿ, ಮಂಗಳೂರಿನಲ್ಲಿ ನಡೆದ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈ ದಾಳಿಯನ್ನು ಖಂಡಿಸಿ ಚಿಕ್ಕಮಗಳೂರು ನಿವಾಸಿಗಳು ಇಂದು ಜಿಲ್ಲೆಯನ್ನು ಬಂದ್ ಮಾಡಿದ್ದಾರೆ.

ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಪೂರ್ಣ ಬಂದ್‌ಗೆ ಕರೆ ನೀಡಲಾಗಿದ್ದು, ಇಂದು ಬೆಳಗ್ಗೆಯಿಂದಲೇ ಯಾವುದೇ ಅಂಗಡಿ ಮುಂಗಟ್ಟುಗಳು ತೆರೆದಿಲ್ಲ.
ದಕ್ಷಿಣ ಕನ್ನಡದಲ್ಲಿ ಸುಹಾಸ್ ಶೆಟ್ಟಿ ಹತ್ಯೆ ಖಂಡಿಸಿ ನಿನ್ನೆ (ಮೆ.02) ಬಂದ್ ಆಚರಣೆ ಮಾಡಲಾಗಿತ್ತು. ಆದರೆ ನಿಷೇಧಾಜ್ಞೆ ಜಾರಿಯಲ್ಲಿದೆ. ಮಂಗಳೂರು ಸೇರಿ ಹಲವು ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.
Comments are closed.