Rain update: ರಾಜ್ಯದಲ್ಲಿ ಮತ್ತೆ ನಾಲ್ಕು ದಿನ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Rain update: ಮುಂದಿನ ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 6 ಜಿಲ್ಲೆಗಳಲ್ಲಿ ಹೈಲರ್ಟ್ ಘೋಷಿಸಲಾಗಿದೆ.
ಮುಂದಿನ 48 ಗಂಟೆ ಕಾಲ ಹಾಸನ, ಮಂಡ್ಯ ಮೈಸೂರಿನಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೇ 4ರಂದು ರಾಮನಗರ, ತುಮಕೂರಿನಲ್ಲಿ ಹೆಚ್ಚಿನ ಮಳೆಯಾಗುವ ಸಂಭವ ಇದೆ. ಚಿಕ್ಕಮಗಳೂರಿನಲ್ಲಿ ಮೇ 3 ರಿಂದ 9ರ ವರೆಗೆ ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಮೇ 3ರಿಂದ 9ರವರೆಗೆ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ವಿಜಯನಗರದಲ್ಲಿ ಸಾಧಾರಣ ಮಳೆ ಆಗಲಿದೆ ಎಂದು ಅಂದಾಜಿಸಲಾಗಿದೆ.
Comments are closed.