Dharmasthala: ಧರ್ಮಸ್ಥಳದಲ್ಲಿ 57ನೇ ವರ್ಷದ ಉಚಿತ ಸಾಮೂಹಿಕ ವಿವಾಹ: 75 ಜೊತೆ ವಧೂ-ವರರು ಭಾಗಿ!

Dharmasthala: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ (Dharmasthala)ಅಮೃತವರ್ಷಿಣಿ ಸಭಾಭವನದಲ್ಲಿ ಶನಿವಾರ ಸಂಜೆ ಗಂಟೆ ೬.೪೮ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ಆಶ್ರಯದಲ್ಲಿ ಆಯೋಜಿಸಿದ 57 ನೇ ವರ್ಷದ ಉಚಿತ ಸಾಮೂಹಿಕ ಸಮಾರಂಭದಲ್ಲಿ 75 ಜೊತೆ ವಧೂ-ವರರು ಗೃಹಸ್ಥಾಶ್ರಮಕ್ಕೆ ಪಾದಾರ್ಪಣೆ ಮಾಡಿದರು.
ವಧೂ-ವರರು ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಹಾರ ವಿನಿಮಯ ಮತ್ತು ಮಾಂಗಲ್ಯಧಾರಣೆ ಮಾಡಿ, ಅವರವರ ಜಾತಿ ಸಂಪ್ರದಾಯದಂತೆ ಧಾರ್ಮಿಕ ವಿಧಿ-ವಿಧಾನಗಳನ್ನು ನಡೆಸಲಾಯಿತು.
Comments are closed.