Harish Poonja: ಕೋಮು ದ್ವೇಷ ಭಾಷಣ ಆರೋಪ; ಶಾಸಕ ಹರೀಶ್‌ ಪೂಂಜಾ ವಿರುದ್ಧ FIR!

Share the Article

Harish Poonja: ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಭಾಷಣ ಆರೋಪದಡಿಯಲ್ಲಿ ಬೆಳ್ತಂಗಡಿ ವಿಧಾನಸಭಾ ಬಿಜೆಪಿ ಶಾಸಕ ಹರೀಶ್‌ ಪೂಂಜಾ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶನಿವಾರ ತೆಕ್ಕಾರು ಗೋಪಾಲಕೃಷ್ಣ ಬ್ರಹ್ಮಕಲಶೋತ್ಸವದಲ್ಲಿ ಕೋಮು ಪ್ರಚೋದನಕಾರಿ ಭಾಷಣೆ ಮಾಡಿದ್ದಾರೆ ಎಂದು ಆರೋಪ ಮಾಡಿ ತೆಕ್ಕಾರು ನಿವಾಸಿ ಇಬ್ರಾಹಿಂ ಎಸ್‌ ಬಿ ದೂರು ದಾಖಲು ಮಾಡಿದ್ದಾರೆ. ಧರ್ಮ, ಧರ್ಮಗಳ ನಡುವೆ ದ್ವೇಷ ಬಿತ್ತುವ ಭಾಷಣ ಮಾಡಿದ್ದಾರೆ ಎಂದು ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Comments are closed.