Plane Crash: ಮನೆಗೆ ಡಿಕ್ಕಿ ಹೊಡೆದ ವಿಮಾನ; ಪೈಲಟ್‌ ಸಾವು!

Share the Article

Plane Crash: ಸಿಮಿ ಕಣಿವೆಯ ಬಳಿ ಸಣ್ಣ ವಿಮಾನವೊಂದು ಪತನಗೊಂಡಿರುವ ಘಟನೆ ನಡೆದಿದ್ದು, ಪೈಲಟ್‌ ಸಾವಿಗೀಡಾಗಿದ್ದಾನೆ ಎಂದು ವರದಿಯಾಗಿದೆ. ಈ ಘಟನೆಯಲ್ಲಿ 2 ಮನೆಗಳಿಗೆ ಹಾನಿಯಾಗಿದೆ ಎನ್ನಲಾಗಿದೆ.

ಲಾಸ್‌ ಏಂಜಲೀಸ್‌ನ ವಾಯುವ್ಯಕ್ಕೆ ಸುಮಾರು 80.47 ಕಿ.ಮೀ. ದೂರದಲ್ಲಿರುವ ಸಿಮಿ ಕಣಿವೆಯ ವುಡ್‌ ರಾಂಚ್‌ ವಿಭಾಗದ ಒಂದು ಮನೆಯ ಛಾವಣಿಯಿಂದ ಹೊಗೆ ಬರುತ್ತಿರುವುದು ಕಂಡು ಬಂದಿದ್ದು, ಅಲ್ಲಿ ಪರಿಶೀಲನೆ ಮಾಡಿದಾಗ ವಿಮಾನ ಪತನಗೊಂಡಿರುವುದು ಕಂಡು ಬಂದಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ಮನೆಗೆ ವಿಮಾನದ ಅವಶೇಷಗಳು ಬಿದ್ದಿದ್ದು, ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ. ಮನೆಯಲ್ಲಿದ್ದ ಜನರನ್ನು ಸ್ಥಳಾಂತರ ಮಾಡಲಾಗಿದೆ. ಎರಡೂ ಮನೆಗಳಿಗೆ ಹಾನಿಯಾಗಿದೆ. ವಿಮಾನ ಅಪಘಾತಕ್ಕೊಳಗಾಗುತ್ತಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಸುಮಾರು 40 ಅಗ್ನಿಶಾಮಕ ದಳದವರು ಬೆಂಕಿ ನಂದಿಸುವ ಕೆಲಸ ಮಾಡಿದರು. ಮನೆ ದುರಸ್ತಿ ಮತ್ತು ರಕ್ಷಣಾ ಕಾರ್ಯಾಚರಣೆ ಮಾಡಲಾಗಿದೆ.

Comments are closed.