Davangere : ಮಂಗಳೂರು ಮೈಸೂರು ಬೆನ್ನಲ್ಲೇ ದಾವಣಗೆರೆಯಲ್ಲಿ ಮತ್ತೊಬ್ಬ ರೌಡಿಶೀಟರ್ ನ ಬರ್ಬರ ಹತ್ಯೆ

Davangere: ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆಯ ಪ್ರಕರಣ ಮಾಸುವ ಮುನ್ನವೇ ಮೈಸೂರಿನಲ್ಲಿ ರೌಡಿಶೀಟರ್ ಒಬ್ಬನ ಬರ್ಬರ ಹತ್ಯೆಯಾಗಿತ್ತು. ಇದೀಗ ಈ ಬೆನ್ನಲ್ಲೇ ದಾವಣಗೆರೆಯಲ್ಲಿ ಮತ್ತೊಬ್ಬ ರೌಡಿ ಶೀಟರ್ ನ ಹತ್ಯೆಯಾಗಿದೆ.
ಹೌದು, ಕುಖ್ಯಾತ ರೌಡಿಶೀಟರ್ ಸಂತೋಷ್ ಕುಮಾರ್ ನನ್ನು ಹಾಡಹಗಲೇ ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಮೃತನನ್ನು ಸಂತೋಷ್ ಕುಮಾರ್ ಅಲಿಯಾಸ್ ಕಣುಮಾ ಎಂದು ಗುರುತಿಸಲಾಗಿದೆ. ಆಟೋದಲ್ಲಿ ಬಂದ ನಾಲ್ಕೈದು ಜನ ದುಷ್ಕರ್ಮಿಗಳ ತಂಡ ದಾವಣಗೆರೆಯ ಖಾಸಗಿ ಆಸ್ಪತ್ರೆಯೊಂದರ ಮುಂಭಾಗ ಕಣ್ಣಿಗೆ ಪೆಪ್ಪರ್ ಸ್ರ್ರೈ ಮಾಡಿ ಹತ್ಯೆಗೈದು ಪರಾರಿಯಾಗಿದ್ದಾರೆ.
ಹತ್ಯೆಗೆ ಕಾರಣ ಏನೆಂದು ತಿಳಿದು ಬಂದಿಲ್ಲ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
Comments are closed.