Railway Passengers Changes: ʼರೈಲ್ವೇʼ ಪ್ರಯಾಣಿಕರಿಗೆ ಮುಖ್ಯ ಮಾಹಿತಿ; ವೇಳಾಪಟ್ಟಿಯಲ್ಲಿ ಬದಲಾವಣೆ!

Share the Article

Railway Passengers Changes: ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿರದೆ ಎಂದು ಪ್ರಕಟಣೆ ತಿಳಿಸಿದೆ.

ವಿಶ್ವಮಾನವ ಎಕ್ಸ್‌ಪ್ರೆಸ್ ಪುನರಾರಂಭ, ಇತರ ರೈಲುಗಳ ವೇಳಾಪಟ್ಟಿಯಲ್ಲಿ ಬದಲಾವಣೆ

ಹಾವೇರಿ ಮತ್ತು ಬ್ಯಾಡಗಿ ನಿಲ್ದಾಣಗಳ ನಡುವಿನ ರೈಲ್ವೆ ಹಳಿಯಲ್ಲಿ ಅಗತ್ಯ ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳು ನಡೆಯುತ್ತಿರುವುದರಿಂದ, ಈ ಕೆಳಗಿನ ರೈಲುಗಳ ವೇಳಾಪಟ್ಟಿಯನ್ನು ಬದಲಾವಣೆ ಮಾಡಲಾಗುತ್ತಿದೆ.

1. ರೈಲು ಸಂಖ್ಯೆ 17325 ಬೆಳಗಾವಿ-ಮೈಸೂರು ವಿಶ್ವಮಾನವ ದೈನಂದಿನ ಎಕ್ಸ್‌ಪ್ರೆಸ್ ರೈಲು ಈ ಮೊದಲು ಮೇ 5, 6, 8, 9, 11, 12, 13, 15 ಮತ್ತು 16, 2025 ರಂದು ಬೆಳಗಾವಿಯಿಂದ 60 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು ಎಂದು ತಿಳಿಸಲಾಗಿತ್ತು. ಆದರೆ, ಈಗ ಈ ರೈಲು ಮೇ 5, 2025 ರಿಂದ ತನ್ನ ಮೊದಲಿನ ವೇಳಾಪಟ್ಟಿಯ ಪ್ರಕಾರ ಎಂದಿನಂತೆ ಸಂಚಾರ ಆರಂಭಿಸಲಿದೆ.

2. ಮೇ 6, 8, 13, 15 ಮತ್ತು 20, 2025 ರಂದು ಬಿಕಾನೇರ್‌ನಿಂದ ಹೊರಡುವ ರೈಲು ಸಂಖ್ಯೆ 16588 ಬಿಕಾನೇರ್‌-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲು ಮಾರ್ಗ ಮಧ್ಯೆ 75 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

3. ಮೇ 5, 6, 8, 9, 11, 12, 13, 15, 16, 18, 19, 20, 22 ಮತ್ತು 23, 2025 ರಂದು ಹೊರಡುವ ರೈಲು ಸಂಖ್ಯೆ 17347 ಹುಬ್ಬಳ್ಳಿ-ಚಿತ್ರದುರ್ಗ ಡೈಲಿ ಎಕ್ಸ್‌ಪ್ರೆಸ್ ಹುಬ್ಬಳ್ಳಿಯಿಂದ 75 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಮತ್ತು ಮಾರ್ಗ ಮಧ್ಯೆ 25 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

Comments are closed.