Kadaba: ಕಡಬ: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು!

Kadaba: ತೋಟದಲ್ಲಿ ತೆಂಗಿನಕಾಯಿ ಕೀಳಲು ಮರಕ್ಕೆ ಹತ್ತಿದ್ದ ವೇಳೆ ಆಯ ತಪ್ಪಿ ಕೆಳಗೆ ಬಿದ್ದ ವ್ಯಕ್ತಿಯೋರ್ವರು ತೀವ್ರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ಕಡಬ ( Kadaba) ತಾಲೂಕು ಬಲ್ಯ ಗ್ರಾಮದ ಪಲ್ಲತಡ್ಕದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿಯನ್ನು ದಿ। ಐತ್ತಪ್ಪ ಪೂಜಾರಿ ಅವರ ಪುತ್ರ ಉಮೇಶ್ ಪೂಜಾರಿ (46) ಎಂದು ಗುರುತಿಸಲಾಗಿದೆ.
ತೆಂಗಿನ ಮರದಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಉಮೇಶ್ ಪೂಜಾರಿ ಅವರು ಕೂಲಿ ಕಾರ್ಮಿಕನಾಗಿದ್ದುಕೊಂಡು ಸಾಮಾಜಿಕ ಕೆಲಸಗಳಲ್ಲಿ ಸಕ್ರಿಯರಾಗಿದ್ದರು. ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ದೇರಾಜೆ ಒಕ್ಕೂಟದ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದರು.
Comments are closed.