Hyderabad: ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ಪ್ರಕಟ!

Share the Article

Hyderabad: ಶಾಸಕ ಗಾಲಿ ಜನಾರ್ಧನ ರೆಡ್ಡಿ ಮತ್ತೆ ಜೈಲು ಸೇರುವುದು ಖಚಿತವಾಗಿದೆ ಎನ್ನಲಾಗಿದೆ. ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ಧನ ರೆಡ್ಡಿ ಅಪರಾಧಿ ಎಂದು ಹೈದರಾಬಾದ್‌ ಸಿಬಿಐ ಕೋರ್ಟ್‌ ತೀರ್ಪು ಪ್ರಕಟ ಮಾಡಿದೆ. ಶಿಕ್ಷೆ ಪ್ರಮಾಣ ಪ್ರಕಟಿಸಿದೆ.

ಓಬಳಾಪುರಂ ಮೈನಿಂಗ್‌ ಕೇಸ್‌ನಲ್ಲಿ ಗಾಲಿ ಜನಾರ್ಧನ ರೆಡ್ಡಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ನ್ಯಾಯಾಲಯವು ಆದೇಶ ಹೊರಡಿಸಿದೆ. ಹೀಗಾಗಿ ಜನಾರ್ಧನ ರೆಡ್ಡಿ ಮತ್ತೆ ಜೈಲುಪಾಲಾಗುವ ಸಾಧ್ಯತೆ ಇದೆ.

ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಡಳಿತದ ಅವಧಿಯಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣ ಇದಾಗಿದೆ. ಆಂಧ್ರ ಮತ್ತು ಕರ್ನಾಟಕದ ಗಡಿ ಭಾಗದ ಓಬಳಾಪುರಂ ಪ್ರದೇಶದ ಅದಿರಿನ ಅಕ್ರಮ ಗಣಿಗಾರಿಕೆಗೆ ಸಂಬಂಧಪಟ್ಟಂತೆ ಜನಾರ್ಧನ ರೆಡ್ಡಿ ಅಪರಾಧಿ ಎಂದು ಕೋರ್ಟ್‌ ತೀರ್ಪು ಪ್ರಕಟವಾಗಿದ್ದು, 7 ವರ್ಷ ಜೈಲು ಶಿಕ್ಷೆ ವಿಧಿಸಿದೆ.

Comments are closed.