Mock Drill: ನಾಳೆ ದೇಶಾದ್ಯಂತ ಏನೆಲ್ಲಾ ನಡೆಯಲಿದೆ?

Mock Drill: ಜಮ್ಮು ಮತ್ತು ಕಾಶ್ಮೀರದ ಪೆಹಲ್ಗಾಮ್ನಲ್ಲಿ ಉಗ್ರರ ದಾಳಿ ಬೆನ್ನಲ್ಲೇ ಭಾರತ ಹಾಗೂ ಪಾಕ್ ಮಧ್ಯೆ ಯುದ್ಧದ ಕಾರ್ಮೋಡ ಆವರಿಸಿದೆ. ಪಾಪಿ ಪಾಕಿಸ್ತಾನದ ವಿರುದ್ಧ ಸಮರ ಸಾರಲು ಭಾರತ ಸರ್ವ ಸನ್ನದ್ಧವಾಗಿದ್ದು, ನಾಳೆ(ಮೇ 07) ದೇಶಾದ್ಯಂತ 259 ಸ್ಥಳಗಳಲ್ಲಿ ಮಾಕ್ ಡ್ರಿಲ್ಗೆ ಕೇಂದ್ರ ಸರ್ಕಾರ ಸೂಚನೆ ಕೊಟ್ಟಿದೆ. ಹಾಗಿದ್ರೆ ಇಂದು ದೇಶದಲ್ಲಿ ಏನೆಲ್ಲಾ ನಡೆಯಲಿದೆ? ಇಲ್ಲಿದೆ ನೋಡಿ ಡಿಟೈಲ್ಸ್

* ವಾಯುದಾಳಿ ಎಚ್ಚರಿಕೆ: ಸುಕ್ಷ್ಮ ಪ್ರದೇಶಗಳಲ್ಲಿ ಶತ್ರುಗಳಿಂದ ವಾಯು ದಾಳಿ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ವಾಯುದಾಳಿಯ ಸೈರನ್ ಮೊಳಗಿಸಿ ಮಾಹಿತಿ ನೀಡುವುದು.
* ರಕ್ಷಣೆ ಕುರಿತು ತರಬೇತಿ: ಪ್ರತಿಕೂಲ ದಾಳಿ ವೇಳೆ ನಮ್ಮನ್ನು ನಾವು ರಕ್ಷಿಸಿಕೊಳ್ಳಲು ತರಬೇತಿ ನೀಡಲಾಗುತ್ತದೆ. ಪ್ರಸ್ತುತ ಇರುವ ಪೀಳಿಗೆ ಯುದ್ಧವನ್ನು ನೋಡಿಲ್ಲ. ಹೀಗಾಗಿ ಇದು ತುಂಬಾನೇ ಮುಖ್ಯವಾಗಿದೆ.
* ವಿದ್ಯುತ್ ದೀಪ್ ಬಂದ್: ವಾಯುದಾಳಿ ಸಂದರ್ಭದಲ್ಲಿ ನಗರ ಮತ್ತು ಹಳ್ಳಿಗಳಲ್ಲಿ ವಿದ್ಯುತ್ ದೀಪ್ ಸಂಪೂರ್ಣ ಬಂದ್ ಆಗಿರಲಿದೆ. ರಾತ್ರಿ ವಾಹನ ಸಂಚಾರ ಸ್ಥಗಿತವಾಗಿರಲಿದೆ. ವೈರಿಗಳಿಗೆ ಜನಸಂಖ್ಯೆ ವಾಸಿಸುವ ಗುರುತು ತಡೆಯಲು ಈ ಕ್ರಮ ಕೈಗೊಳ್ಳಲಾಗುತ್ತದೆ. ಅಂತೆಯೇ 244 ಜಿಲ್ಲೆಗಳಲ್ಲಿ ವಿದ್ಯುತ್ ದೀಪ್ ಬಂದ್ ಆಗಲಿದೆ.
* ಪ್ರಮುಖ ಸ್ಥಾವರಗಳ ಮರೆಮಾಚುವಿಕೆ: ದೇಶದ ಆಸ್ತಿ ಆಗಿರುವ ಪ್ರಮುಖ ಸ್ಥಾವರಗಳನ್ನು ಶತ್ರುಗಳಿಂದ ಬಚ್ಚಿಟ್ಟುಕೊಳ್ಳುವುದು ಮುಖ್ಯವಾಗಿದೆ. ಅವುಗಳ ಮೇಲೆ ದಾಳಿ ಆಗದಂತೆ ಮರೆಮಾಚಿಕೊಳ್ಳಬೇಕಾದ ಅಗತ್ಯ ಇರುತ್ತದೆ. ಹೀಗಾಗಿ ಈ ಬಗ್ಗೆಯೂ ಮಾಹಿತಿ ನೀಡಲಾಗುತ್ತದ
* ರೆಸ್ಕ್ಯೂ ಆಪರೇಷನ್ ಬಗ್ಗೆ ತರಬೇತಿ: ದುರ್ಗಮ ಪ್ರದೇಶಗಳಲ್ಲಿ ಸಂಕಷ್ಟಕ್ಕೆ ಸಿಲುಕಿದವರನ್ನು ಹೇಗೆ ರಕ್ಷಣೆ ಮಾಡಬೇಕು ಅನ್ನೋದ್ರ ಬಗ್ಗೆ ಅಣಕು ಕಾರ್ಯಾಚರಣೆ ನಡೆಸಲಾಗುತ್ತದೆ
Comments are closed.