Operation Sindhoor : ಪಾಕ್ ಉಗ್ರ ನೆಲೆಗಳ ಮೇಲೆ ಭಾರತದ ಕ್ಷಿಪ್ರ ದಾಳಿ – 200 ಕ್ಕೂ ಹೆಚ್ಚು ಭಯೋತ್ಪಾದಕರ ಹತ್ಯೆ

Share the Article

Operation Sindhoor : ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ ‘ಆಪರೇಷನ್ ಸಿಂಧೂರ್’ ಅನ್ನು ಪ್ರಾರಂಭಿಸಿದೆ.

ಇದೀಗ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ 9 ಭಯೋತ್ಪಾದಕ ಅಡಗುತಾಣಗಳ ಮೇಲೆ ನಿಖರವಾದ ದಾಳಿ ನಡೆಸಿದ್ದು ಈ ದಾಳಿಗಳಲ್ಲಿ ಸುಮಾರು 200 ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಮತ್ತು 55 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರಿ ಮೂಲಗಳು ತಿಳಿಸಿವೆ.

ಮೂಲಗಳ ಪ್ರಕಾರ, ಆಪರೇಷನ್ ಸಿಂಧೂರ್ ಅಡಿಯಲ್ಲಿ, ಪಾಕಿಸ್ತಾನದ ಮುರಿಡ್ಕೆ, ಕೋಟ್ಲಿ, ಮುಜಫರಾಬಾದ್ ಮತ್ತು ಬಹವಾಲ್ಪುರ್ ಸೇರಿದಂತೆ 9 ಸ್ಥಳಗಳ ಮೇಲೆ ಕ್ಷಿಪಣಿಗಳನ್ನು ಹಾರಿಸಲಾಗಿದೆ. ಇಲ್ಲಿದ್ದ ಭಯೋತ್ಪಾದಕರ ಅಡಗುತಾಣಗಳನ್ನು ನಾಶಪಡಿಸಲಾಗಿದೆ.

ದಾಳಿಯ ನಂತರ, ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೋವಲ್ ಅವರು ಅಮೆರಿಕದ ಎನ್‌ಎಸ್‌ಎ ಮತ್ತು ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೊ ಅವರನ್ನು ಸಂಪರ್ಕಿಸಿ ಕಾರ್ಯಾಚರಣೆಯ ಬಗ್ಗೆ ಮಾಹಿತಿ ನೀಡಿದರು. ದಾಳಿಯ ವರದಿಗಳು ತಮಗೆ ಬಂದಿವೆ ಎಂದು ಅಮೆರಿಕ ವಿದೇಶಾಂಗ ಇಲಾಖೆಯ ವಕ್ತಾರರು ಎಎನ್‌ಐಗೆ ತಿಳಿಸಿದ್ದಾರೆ.

Comments are closed.