Plane Delayed: ಬೆಂಗಳೂರು, ಮಂಗಳೂರಿಂದ ಕೆಲ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ

Share the Article

Plane Delayed: ಉಗ್ರರ ವಿರುದ್ಧ ನಡೆಸಲಾದ ಆಪರೇಷನ್ ‘ಸಿಂದೂರ’ ವಾಯು ದಾಳಿ ಹಿನ್ನೆಲೆಯಲ್ಲಿ ದೇಶದ ವಿವಿಧ ನಗರಗಳಲ್ಲಿ ವಾಯುಯಾನ ನಿಷೇಧಿಸಿದ್ದು, ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದಲೂ ಹಲವು ವಿಮಾನಗಳ ಕಾರ್ಯಾಚರಣೆಯಲ್ಲಿ ವ್ಯತ್ಯಯವಾಗಿದೆ.

ಪ್ರಮುಖವಾಗಿ ಜಮ್ಮು, ಶ್ರೀನಗರ, ಪಂಜಾಬ್‌ನ ಅಮೃತ್ ಸರ, ಮಧ್ಯಪ್ರದೇಶದ ಗ್ವಾಲಿಯರ್, ಉತ್ತರಪ್ರದೇಶದ ಗಾಜಿಯಾಬಾದ್‌ನ ಹಿಂಡನ್ ವಿಮಾನ ನಿಲ್ದಾಣಕ್ಕೆ ಸೇವೆ ನಿಷೇಧಿಸಲಾಗಿದೆ. ಈ ಬಗ್ಗೆ ವಿಮಾನಯಾನ ಸಂಸ್ಥೆಗಳು ತಮ್ಮ ಪ್ರಯಾಣಿಕರಿಗೆ ಸೂಚನೆ ನೀಡಿದ್ದು, ನಿಗದಿತ ವಿಮಾನ ನಿಲ್ದಾಣಗಳಿಗೆ ಮೇ 10ರ ಬೆಳಗ್ಗೆ 5.30ರವರೆಗೆ ಸೇವೆ ಇರುವುದಿಲ್ಲ ಎಂದು ಪ್ರಕಟಿಸಿವೆ. ಬುಧವಾರ ಬೆಂಗಳೂರಲ್ಲಿ 20ಕ್ಕೂ ಹೆಚ್ಚಿನ ವಿಮಾನಗಳ ಹಾರಾಟದಲ್ಲಿ ವ್ಯತ್ಯಯವಾಗಿದೆ.

Comments are closed.