Eshwar Khandre: ಅಕ್ರಮವಾಗಿ ಮರ ಕಡಿತ: ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ

Share the Article

Eshwar Khandre: ಅಕ್ರಮವಾಗಿ ಮರಗಳನ್ನು ಕಡಿಯುವವರ ವಿರುದ್ದ ಕಠಿಣ ಕ್ರಮ ಜರುಗಿಸುವುದು ಮತ್ತು ದುಬಾರಿ ದಂಡ ವಿಧಿಸುವ ಸಂಬಂಧ ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯವಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ.

ಅರಣ್ಯ ಭವನದಲ್ಲಿ ಗುರುವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿ, ಹೆಚ್ಚಿನ ಪ್ರಮಾಣದಲ್ಲಿ ಮರ ಕಡಿತಲೆ ಮಾಡುವ ವಿರುದ್ಧ ಸುಪ್ರೀಂಕೋರ್ಟ್ ಕೂಡ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯಂಥ ಸನ್ನಿವೇಶಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಮರಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆ. ಹೀಗಾಗಿ ಅನುಮತಿಯಿಲ್ಲದೆ ಅಕ್ರಮವಾಗಿ ಮರಗಳನ್ನು ಕಡಿತಲೆ ಮಾಡುವುದನ್ನು ತಡೆಯಲು ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಬೇಕಿದೆ ಎಂದರು.

Comments are closed.