Mangalore: ಪ್ರಚೋದನಕಾರಿ ಪೋಸ್ಟ್; ಇನ್ಸ್ಟಾಗ್ರಾಂ ಪೇಜ್ ಡಿಲೀಟ್!

Mangalore: ಮಂಗಳೂರು ನಗರದ ಬಜ್ಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಚೋದನಕಾರಿ ಪೋಸ್ಟ್ ಮಾಡಿದ ಆರೋಪದ ಮೇಲೆ 1 ಲಕ್ಷಕ್ಕೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದ ಇನ್ಸ್ಟಾಗ್ರಾಂ ಪೇಜನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ ಘಟನೆ ನಡೆದಿದೆ.

beary_royal_nawab’ ಧಾರ್ಮಿಕ ಮತ್ತು ಸಮುದಾಯ ಗುಂಪುಗಳ ನಡುವೆ ದ್ವೇಷವನ್ನು ಪ್ರಚೋದಿಸುವ ವಿಷಯವನ್ನು ಪೋಸ್ಟ್ ಮಾಡಲಾಗುತ್ತಿದ್ದ ಕಾರಣ ಈ ಪೋಸ್ಟ್ಗಳು ದ್ವೇಷವನ್ನು ಉತ್ತೇಜಿಸುತ್ತಿದ್ದವು ಮತ್ತು ಕಾನೂನು ಬಾಹಿರ ಚಟುವಟಿಕೆಗಳನ್ನು ಪ್ರೋತ್ಸಾಹಿಸುತ್ತವೆ ಎಂದು ಪೊಲೀಸರು ಮಾಹಿತಿ ನೀಡಿರುವ ಕುರಿತು ವರದಿಯಾಗಿದೆ.
ಬರ್ಕೆ ಮತ್ತು ಮುಲ್ಕಿ ಪೊಲೀಸ್ ಠಾಣೆಗಳಲ್ಲಿ ಈ ಇನ್ಸ್ಟಾಗ್ರಾಂ ಪೇಜ್ ವಿರುದ್ಧ ಮೂರು ಪ್ರಕರಣಗಳು ದಾಖಲಾಗಿದೆ.
Comments are closed.